ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಏಳು ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ದೆಹಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಾಂಬಾ ಹೇಳಿಕೆ ನೀಡಿದ್ದು ಎಎಪಿಗೆ ದೊಡ್ಡ ಮಟ್ಟದಲ್ಲಿ ಆಘಾತ ನೀಡಿದೆ. ಕಾಂಗ್ರೆಸ್ ಮತ್ತು ಎಎಪಿ ವಿಪಕ್ಷ ಮೈತ್ರಿಕೂಟ INDIAದ ಭಾಗವಾಗಿವೆ.
ಅಲ್ಕಾ ಲಾಂಬಾ ಹೇಳಿಕೆಗೆ ಎಎಪಿಯಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು, INDIA ಮೈತ್ರಿಕೂಟ ಬಹಿಷ್ಕರಿಸುವ ಬೆದರಿಕೆ ಹಾಕಿದೆ.
ಇದೀಗ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಇದೀಗ ಯು ಟರ್ನ್ ಹೊಡೆದಿದೆ, ಸಭೆಯಲ್ಲಿ ಚುನಾವಣೆ ಅಥವಾ ಮೈತ್ರಿ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳುವ ಮೂಲಕ ಪಕ್ಷದ ನಾಯಕಿ ಅಲ್ಕಾ ಲಂಬಾ ಅವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ದೆಹಲಿಯ ಕಾಂಗ್ರೆಸ್ ಉಸ್ತುವಾರಿ ದೀಪಕ್ ಬಬಾರಿಯಾ ಅವರು ಲಾಂಬಾ ಹೇಳಿಕೆಯನ್ನು ಅಪಕ್ವ ಎಂದು ಕರೆದರು.
ಇದಕ್ಕೂ ಮುನ್ನ ಕಾಂಗ್ರೆಸ್ ಪಕ್ಷದ ದೆಹಲಿ ಘಟಕದ ಸಭೆ ನಡೆಯಿತು. ಸಭೆಯ ನಂತರ, ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ, 2024 ರ ಚುನಾವಣೆಗೆ ಏಳು ಲೋಕಸಭಾ ಸ್ಥಾನಗಳಿಗೆ ತಯಾರಿಯನ್ನು ಪ್ರಾರಂಭಿಸಲು ಪಕ್ಷವು ತನ್ನ ಕಾರ್ಯಕರ್ತರು ಮತ್ತು ಮುಖಂಡರನ್ನು ಕೇಳಿದೆ ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ಕಾಂಗ್ರೆಸ್ ಮತ್ತು ಎಎಪಿ ನಡುವಣ ಭಿನ್ನಾಭಿಪ್ರಾಯಗಳು ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸ್ಪಷ್ಟವಾಗಿ ತಿಳಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.