ನವದೆಹಲಿ: ಭಾರತದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿಯನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಉದ್ಘಾಟಿಸಲಿದ್ದಾರೆ. ವರದಿಗಳ ಪ್ರಕಾರ ಅವರು ನಾಳೆ ಬೆಳಗ್ಗೆ ಜಿಪಿಒ ಬೆಂಗಳೂರಿನಿಂದ ರಿಮೋಟ್ ಮೂಲಕ ಉದ್ಘಾಟಿಸಲಿದ್ದಾರೆ.
ಮಾರ್ಚ್ 21ರಿಂದ ನಿರ್ಮಾಣ ಕಾರ್ಯ ಆರಂಭವಾಗಿದ್ದು 44 ದಿನಗಳ ಅವಧಿಯಲ್ಲಿ ಇದನ್ನು ಸಿದ್ಧಪಡಿಸಲಾಗಿದೆ. 1,100 ಚದರ ಅಡಿ ವಿಸ್ತೀರ್ಣದ ಕಟ್ಟಡವು ತಾಂತ್ರಿಕ ಹಸ್ತಕ್ಷೇಪದ ಕಾರಣ ಸಾಂಪ್ರದಾಯಿಕ ಕಟ್ಟಡಗಳಿಗಿಂತ 30-40 ಪ್ರತಿಶತ ಕಡಿಮೆ ವೆಚ್ಚದಿಂದ ನಿರ್ಮಾಣವಾಗಿದೆ. 23 ಲಕ್ಷ ವೆಚ್ಚದಲ್ಲಿ ಅಂಚೆ ಕಚೇರಿ ನಿರ್ಮಿಸಲಾಗಿದೆ.ಇದನ್ನು ‘ಕೇಂಬ್ರಿಡ್ಜ್ ಲೇಔಟ್ ಪಿಒ’ ಎಂದು ಹೆಸರಿಸಲಾಗಿದೆ.
ಕಟ್ಟಡದ ರಚನೆಯು ಮೇ 3ರೊಳಗೆ ಪೂರ್ಣಗೊಂಡಿದ್ದರೂ, ಒಳಚರಂಡಿ ಮತ್ತು ನೀರಿನ ಜಾಲವನ್ನು ರಚಿಸುವುದು ಎರಡು ತಿಂಗಳುಗಳನ್ನು ತೆಗೆದುಕೊಂಡಿತ್ತು. ನಂತರ ಸಚಿವರ ಸಮಯಾವಕಾಶಕ್ಕಾಗಿ ಇನ್ನೂ ಒಂದು ತಿಂಗಳು ಹಿಡಿಯಿತು. ಇನ್ನು ಔಪಚಾರಿಕವಾಗಿ 3ಡಿ ಮುದ್ರಿತ ಕಚೇರಿ ಆರಂಭದ ನಂತರ ಹಲಸೂರು ಬಜಾರ್ನಲ್ಲಿರುವ ಪ್ರಸ್ತುತ ಅಂಚೆ ಕಚೇರಿಯನ್ನು ಮುಚ್ಚಲಾಗುವುದು ಮತ್ತು ಸಿಬ್ಬಂದಿ ಮತ್ತು ಸಾಮಗ್ರಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.