ನವದೆಹಲಿ: ಹೆದ್ದಾರಿ ವಲಯ ಪುನಶ್ಚೇತನದ ಸೂಚನೆಯನ್ನು ನೀಡುತ್ತಿದೆ ಮತ್ತು ಹೂಡಿಕೆದಾರರ ಆಸಕ್ತಿಯನ್ನೂ ಹೆಚ್ಚಿಸುತ್ತಿದೆ. ಇದಕ್ಕೆ ಕಾರಣ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ದಿನಕ್ಕೆ 30 ಕಿ.ಮೀ ಹೆದ್ದಾರಿ ನಿರ್ಮಿಸುವ ಗುರಿಯನ್ನು ಹೊಂದಿರುವುದು.
ಹೆದ್ದಾರಿ ನಿರ್ಮಾಣ ಕಾರ್ಯ ಆಗಸ್ಟ್ ಅಂತ್ಯದವರೆಗೆ 16 ಕಿ.ಮೀ. ವರೆಗೆ ಸಾಗಿತ್ತು, ಇದು ಕಳೆದ ವರ್ಷದ 13 ಕಿ.ಮೀ. ದಾಖಲೆಯನ್ನು ಮುರಿದಿದೆ. ಇದೀಗ ಸರ್ಕಾರ 30 ಕಿ.ಮೀ. ಟಾರ್ಗೆಟ್ ಇಟ್ಟುಕೊಂಡಿದೆ. ಹೀಗಾಗಿ ಹೂಡಿಕೆದಾರರು ಈ ವಲಯದಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಕಾಸ್ ಸ್ವರೂಪ್, ’ಪ್ರಧಾನಿಯವರು ದಿನಕ್ಕೆ 30 ಕಿ.ಮೀ. ರಸ್ತೆ ನಿರ್ಮಿಸುವ ಗುರಿಯನ್ನು ಹೊಂದಿದ್ದಾರೆ. ಇದು ಈಗಿರುವ ಮಟ್ಟಕ್ಕಿಂತ 13 ಕಿ.ಮೀ. ಹೆಚ್ಚು. ಎಪ್ರಿಲ್ ಅಂತ್ಯದಲ್ಲಿ ದಿನಕ್ಕೆ 17-18 ಕಿ.ಮೀ. ರಸ್ತೆ ನಿರ್ಮಿಸಲಾಗಿದೆ ಎಂದು ಸಾರಿಗೆ ಸಚಿವಾಲಯ ಹೇಳಿದೆ. ಮುಂದಿನ ಹಣಕಾಸು ವರ್ಷದಲ್ಲಿ ಇದು ಹೆಚ್ಚಾಗಲಿದೆ’ ಎಂದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಸ್ತೆ ಮತ್ತು ಹೆದ್ದಾರಿ ವಲಯದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಇದಕ್ಕೆ ಕಾರಣ ಯೋಜನೆಗೆ ಅಡ್ಡಿಯಾಗಿದ್ದ ವಿಷಯಗಳ ನಿರ್ಮೂಲನೆ ಮತ್ತು ನಿಧಾನ ಪ್ರಗತಿಯ ವಿರುದ್ಧ ಸರ್ಕಾರ ತೆಗೆದುಕೊಂಡಿರುವ ಕ್ರಮ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.