ನವದೆಹಲಿ: ಲಡಾಖ್ನಲ್ಲಿ ನಿನ್ನೆ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ ಒಂಬತ್ತು ಭಾರತೀಯ ಸೇನೆಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಕೆಳಗೆ ಜಾರಿ ಆಳವಾದ ಕಮರಿಗೆ ಧುಮುಕಿದೆ. ಈ ವಾಹನ ಲೇಹ್ನಿಂದ ನ್ಯೋಮಾಗೆ ಹೋಗುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿತ್ತು ಮತ್ತು ಕಿಯಾರಿ ಗ್ರಾಮದಿಂದ 6 ಕಿಲೋಮೀಟರ್ ಮುಂದೆ ಅಪಘಾತ ಸಂಭವಿಸಿದೆ.
ಲೇಹ್ ಮೂಲದ ರಕ್ಷಣಾ ವಕ್ತಾರರ ಪ್ರಕಾರ, ಮೃತರಲ್ಲಿ ಒಂಬತ್ತು ಸೈನಿಕರು ಮತ್ತು ಜೂನಿಯರ್ ಕಮಿಷನ್ಡ್ ಆಫೀಸರ್ ಸೇರಿದ್ದಾರೆ. ಅಪಘಾತಕ್ಕೀಡಾದ ಅಶೋಕ್ ಲೇಲ್ಯಾಂಡ್ ಸ್ಟಾಲಿಯನ್ ಟ್ರಕ್ ಒಟ್ಟು 34 ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಜಿಪ್ಸಿ ಮತ್ತು ಆಂಬ್ಯುಲೆನ್ಸ್ ಅನ್ನು ಒಳಗೊಂಡ ಬೆಂಗಾವಲಿನ ಭಾಗವಾಗಿತ್ತು. ಟ್ರಕ್ನಲ್ಲಿ 10 ಸೈನಿಕರು ಪ್ರಯಾಣಿಸುತ್ತಿದ್ದರು, ಅವರಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡರು ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ವರದಿಗಳು ತಮಗೆ ತಲುಪಿದ ತಕ್ಷಣ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಲೇಹ್ ತಿಳಿಸಿದ್ದಾರೆ. ಗಾಯಗೊಂಡ ಯೋಧರನ್ನು ಲೇಹ್ನಲ್ಲಿರುವ ಸೇನಾ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಗೆ ಕರೆದೊಯ್ಯುವಾಗ, ಒಬ್ಬ ಯೋಧ ಸಾವನ್ನಪ್ಪಿದರು. ಅಧಿಕಾರಿಗಳು ನೀಡಿದ ಮಾಹಿತಿಯಂತೆ ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದೇ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಯೋಧರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರ ಆದರ್ಶ ಸೇವೆಯನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಲೇಹ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತೀಯ ಸೇನಾ ಸಿಬ್ಬಂದಿಗಳ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಲೇಹ್ ಬಳಿ ನಡೆದ ದುರ್ಘಟನೆಯಲ್ಲಿ ದೇಶವು ಭಾರತೀಯ ಸೇನೆಯ ಸಿಬ್ಬಂದಿಯನ್ನು ಕಳೆದುಕೊಂಡಿರುವ ಬಗ್ಗೆ ನನಗೆ ನೋವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶಕ್ಕೆ ಅವರು ನೀಡಿದ ಉತ್ಕೃಷ್ಟ ಸೇವೆಯನ್ನು ಸದಾ ಸ್ಮರಿಸಲಾಗುವುದು ಎಂದು ಮೋದಿ ಸಂದೇಶದಲ್ಲಿ ತಿಳಿಸಿದ್ದಾರೆ.
Pained by the mishap near Leh in which we have lost personnel of the Indian Army. Their rich service to the nation will always be remembered. Condolences to the bereaved families. May those who are injured recover at the earliest: PM @narendramodi
— PMO India (@PMOIndia) August 19, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.