ಭೋಪಾಲ್: ಮಧ್ಯಪ್ರದೇಶ ಉದ್ಯೋಗ ಮೇಳವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಇಂದು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, NITI ಆಯೋಗ ವರದಿಯ ಪ್ರಕಾರ, ಐದು ವರ್ಷಗಳಲ್ಲಿ 13.5 ಕೋಟಿ ಜನರು ಬಡತನ ರೇಖೆಗಿಂತ ಮೇಲಕ್ಕೆ ಹೋಗಿದ್ದಾರೆ ಎಂದು ಹೇಳಿದರು.
ಕಳೆದ 9 ವರ್ಷಗಳಲ್ಲಿ ದೇಶದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ತೆರಿಗೆ ಪಾವತಿಸಲು ಮುಂದೆ ಬರುತ್ತಿದ್ದಾರೆ ಎಂದರು, ಅಲ್ಲದೇ ಅವರ ತೆರಿಗೆಯನ್ನು ದೇಶದ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂಬುದು ಕೂಡ ನಾಗರಿಕರಿಗೆ ತಿಳಿದಿದೆ ಎಂದು ಪ್ರಧಾನಿ ಹೇಳಿದರು. ದೇಶದ ನಾಗರಿಕರು 2014ರ ಮೊದಲಿನ ದಿನಗಳನ್ನು ಮರೆಯಲು ಸಾಧ್ಯವಿಲ್ಲ, ಆಗ ಭಾರಿ ಹಗರಣಗಳು ಮತ್ತು ಭ್ರಷ್ಟಾಚಾರಗಳು ನಡೆಯುತ್ತಿದ್ದವು. ಇಂದು ಬಡವರು ತಮ್ಮ ಪಾಲಿನ ಹಣವನ್ನು ನೇರವಾಗಿ ತಮ್ಮ ಬ್ಯಾಂಕ್ ಖಾತೆಯಿಂದ ಪಡೆಯುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಹೊಸದಾಗಿ ಸೇರ್ಪಡೆಗೊಂಡವರನ್ನು ಪ್ರಧಾನಿ ಅಭಿನಂದಿಸಿದರು.
ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹೊಸದಾಗಿ ನೇಮಕಗೊಂಡ 5 ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ನೇಮಕಾತಿ ಪತ್ರ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.