ನವದೆಹಲಿ: ಚಂದ್ರನ ಅಂಗಳದಲ್ಲಿ ಚಂದ್ರಯಾನ-3 ಮಿಷನ್ ನೌಕೆ ಇಳಿಯುವ ಐತಿಹಾಸಿಕ ಕ್ಷಣಕೆ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ನೌಕೆಯ ಟಚ್ ಡೌನ್ ಯಶಸ್ವಿಯಾಗಲಿದೆ ಎಂದು ಸಮಸ್ತ ಭಾರತೀಯರು ಪ್ರಾರ್ಥಿಸುತ್ತಿದ್ದಾರೆ. ಕೊನೆಯ 20 ನಿಮಿಷಗಳು ಅತ್ಯಂತ ನಿರ್ಣಾಯಕವಾಗಿದ್ದು, ಈ ವೇಳೆ ಬಹುಶಃ ಪ್ರತಿಯೊಬ್ಬ ಭಾರತೀಯರ ಎದೆಬಡಿತ ಹೆಚ್ಚಾಗಿರುತ್ತೆ.
ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 ನೌಕೆಯ ವಿಕ್ರಮ್ ಲ್ಯಾಂಡರ್ ಅನ್ನು ಇಳಿಸುವ ಈ ಮಹತ್ವದ ಕ್ಷಣವನ್ನ ಕಣ್ತುಂಬಿಕೊಳ್ಳಲು ಜನ ಕಾತುರವಾಗಿದ್ದಾರೆ. ಚಂದ್ರಯಾನ-2ನಲ್ಲಿ ಅಂತಿಮ ಕ್ಷಣದಲ್ಲಿ ಉಂಟಾದ ನೋವು ಈ ಬಾರಿ ಉಂಟಾಗದಿರಲಿ ಎಂಬುದು ಎಲ್ಲರ ಆಶಯ. ಅದಕ್ಕಾಗಿ ವಿಜ್ಞಾನಿಗಳು ಮಾತ್ರವಲ್ಲ, ಜನಸಾಮಾನ್ಯರೂ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ವಿಕ್ರಂ ಸುರಕ್ಷಿತವಾಗಿ ಚಂದ್ರನ ಅಂಗಳವನ್ನ ತಲುಪಿದರೆ ವಿಶ್ವದಲ್ಲಿ ಈ ಸಾಧನೆ ಮಾಡಿದ ಗರಿಮೆ ಇಸ್ರೋ ಪಾಲಿಗೆ ಒದಗಿ ಬರಲಿದೆ. ಚಂದ್ರಯಾನ-3 ರ ಲ್ಯಾಂಡಿಂಗ್ ಭಾರತಕ್ಕೆ ಐತಿಹಾಸಿಕ ಮೈಲಿಗಲ್ಲಾಗಲಿದೆ. ಏಕೆಂದರೆ ಇದು ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ನ ಸಂಕೀರ್ಣ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡ ನಾಲ್ಕನೇ ರಾಷ್ಟ್ರವಾಗಿ ಗುರುತಿಸಿಕೊಳ್ಳಲಿದೆ. ಅಮೆರಿಕ, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟಗಳ ಸಾಧನೆಯ ಶ್ರೇಣಿಗೆ ಸೇರಲಿದೆ. ಅಷ್ಟೇ ಅಲ್ಲದೇ ಚಂದ್ರನ ದಕ್ಷಿಣ ಧ್ರುವಕ್ಕೆ ನೌಕೆಯನ್ನು ಇಳಿಸಿ ಮೊದಲ ದೇಶವಾಗಿ ಭಾರತ ಹೊರಹೊಮ್ಮಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.