ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ, ಕಾಂಗ್ರೆಸ್ ಸಂಸದರು, ಶಾಸಕರು ಸೇರಿ ಹಲವು ಮುಖಂಡರು ಭಾಗಿಯಾಗಿದ್ದಾರೆ.
ರಾಜ್ಯದಲ್ಲಿ ಮಳೆ ಕೊರತೆ ಇದ್ದರೂ ತನಗೆ ಬಾಕಿ ಇರುವ ನೀರನ್ನು ಬಿಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿರುವ ಕಾರಣ ರಾಜ್ಯ ಕಾಂಗ್ರೆಸ್ ಸರ್ಕಾರ ನಾಡಿನ ರೈತರು ಮತ್ತು ತಮಿಳುನಾಡಿಗೆ ಬಿಡಬೇಕಾದ ನೀರಿನ ಬಗ್ಗೆ ಚರ್ಚೆ ನಡೆಸಲು ಸರ್ವ ಪಕ್ಷಗಳ ಸಭೆ ಕರೆದಿದೆ.
ಸರ್ಕಾರ ಪೂರ್ವಾಪರ ಯೋಚಿಸದೆ ತಮಿಳುನಾಡಿಗೆ ನೀರು ಹಂಚಿಕೆ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ರೈತರಿಂದ ದೊಡ್ಡ ಮಟ್ಟದಲ್ಲಿ ಪ್ರತಭಟನೆಗಳು ವ್ಯಕ್ತವಾಗಿದ್ದವು. ಬಿಜೆಪಿ ಕೂಡ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಕೆಲಸ ಮಾಡಿದೆ. ಪ್ರತಿಭಟನೆಯ ಬಿಸಿಯಿಂದ ಎಚ್ಚೆತ್ತು ಸರ್ಕಾರ ಸರ್ವಪಕ್ಷ ಸಭೆ ನಡೆಸಿದೆ.
ಸರ್ವಪಕ್ಷ ಸಭೆ ನಡೆಸಿ ಅಂತ ವಿರೋಧ ಪಕ್ಷದ ನಾಯಕರು ದುಂಬಾಲು ಬಿದ್ದ ಕಾರಣ ಸರ್ಕಾರ ಸಭೆ ಕರೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
Visuals of the all-party meeting on Cauvery water dispute at Vidhana Soudha in Bengaluru. pic.twitter.com/xXDmNm92dE
— Press Trust of India (@PTI_News) August 23, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.