ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಮಾಫೋಸಾ ಅವರೊಂದಿಗೆ ಮಹತ್ವದ ಸಭೆಯನ್ನು ನಡೆಸಿದರು ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಗಾಢವಾಗಿಸುವ ಉದ್ದೇಶದಿಂದ ಹಲವಾರು ವಿಷಯಗಳ ಕುರಿತು ಚರ್ಚಿಸಿದರು ಮತ್ತು ಜಾಗತಿಕ ದಕ್ಷಿಣದ ಧ್ವನಿಯನ್ನು ಬಲಪಡಿಸಲು ಜಂಟಿಯಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಛರಿಸಿದರು.
ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ಗೆ ಮೂರು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಆಗಸ್ಟ್ 22-24 ರವರೆಗೆ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ನಡೆಯಲಿರುವ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷ ರಾಮಾಫೋಸಾ ಅವರ ಆಹ್ವಾನದ ಮೇರೆಗೆ ಮಂಗಳವಾರ ಮೋದಿ ಜೋಹನ್ಸ್ಬರ್ಗ್ ತಲುಪಿದರು.
”ಅಧ್ಯಕ್ಷ ಸಿರಿಲ್ ರಮಾಫೋಸಾ ಅವರೊಂದಿಗೆ ಅತ್ಯುತ್ತಮವಾದ ಸಭೆಯನ್ನು ನಡೆಸಿದ್ದೇವೆ,” ಎಂದು ಬ್ರಿಕ್ಸ್ ಶೃಂಗಸಭೆಯ ಮೊದಲು ನಡೆದ ಸಭೆಯ ನಂತರ ಮೋದಿ ಟ್ವೀಟ್ ಮಾಡಿದ್ದಾರೆ.
”ಭಾರತ-ದಕ್ಷಿಣ ಆಫ್ರಿಕಾ ಸಂಬಂಧಗಳನ್ನು ಗಾಢಗೊಳಿಸುವ ಉದ್ದೇಶದಿಂದ ನಾವು ವ್ಯಾಪಕ ಶ್ರೇಣಿಯ ವಿಷಯಗಳನ್ನು ಚರ್ಚಿಸಿದ್ದೇವೆ. ವ್ಯಾಪಾರ, ರಕ್ಷಣೆ ಮತ್ತು ಹೂಡಿಕೆ ಸಂಬಂಧಗಳು ನಮ್ಮ ಚರ್ಚೆಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಂಡವು. ಗ್ಲೋಬಲ್ ಸೌತ್ನ ಧ್ವನಿಯನ್ನು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದಿದ್ದಾರೆ.
Had an excellent meeting with President @CyrilRamaphosa. We discussed a wide range of issues aimed at deepening India-South Africa relations. Trade, defence and investment linkages featured prominently in our discussions. We will keep working together to strengthen the voice of… pic.twitter.com/xhxEClr1Dl
— Narendra Modi (@narendramodi) August 23, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.