1ಜೋಹನ್ಸ್ಬರ್ಗ್: ಬ್ರಿಕ್ಸ್ ಶೃಂಗಸಭೆಯಲ್ಲಿ ಗ್ರೂಪ್ ಫೋಟೋ ಕ್ಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶಭಕ್ತಿಗೆ ಗಮನಾರ್ಹ ಉದಾಹರಣೆಯನ್ನು ನೀಡಿದ್ದಾರೆ. ನೆಲದ ಮೇಲೆ ಭಾರತೀಯ ತ್ರಿವರ್ಣ ಧ್ವಜ ಇರುವುದನ್ನು ಕಂಡ ಅವರು ತಕ್ಷಣವೇ ಅದನ್ನು ಎತ್ತಿಕೊಂಡು ತಮ್ಮ ಜೇಬಿನೊಳಗೆ ಹಾಕಿಕೊಂಡಿದ್ದಾರೆ. ಈ ಮೂಲಕ ತ್ರಿವರ್ಣ ಧ್ವಜಕ್ಕೆ ಅಗೌರವ ಆಗದಂತೆ ತಡೆದಿದ್ದಾರೆ.
ಯಾವ ದೇಶದ ನಾಯಕ ಎಲ್ಲಿ ನಿಲ್ಲಬೇಕು ಎಂಬುದನ್ನು ಗುರುತಿಸಲು ತ್ರಿವರ್ಣ ಧ್ವಜ ಫೋಟೋಗಳನ್ನು ನೆಲದ ಮೇಲೆ ಇಡಲಾಗಿತ್ತು. ಪ್ರಧಾನಿ ಮೋದಿ ಅವರು ಧ್ವಜ ಫೋಟೋವನ್ನು ಎಚ್ಚರಿಕೆಯಿಂದ ಎತ್ತಿ ತಮ್ಮ ಜೇಬಿನಲ್ಲಿ ಇಟ್ಟುಕೊಂಡು ಅದರ ಘನತೆಯನ್ನು ಖಾತ್ರಿಪಡಿಸಿಕೊಂಡ ಕ್ಷಣದ ವಿಡಿಯೋ ವೈರಲ್ ಆಗಿದೆ.
ಆದರೆ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರು ತಮ್ಮ ಸ್ಥಾನವನ್ನು ಗುರುತಿಸಲು ಇರಿಸಲಾದ ಧ್ವಜದ ಮೇಲೆ ಹೆಜ್ಜೆ ಇಟ್ಟಿದ್ದಾರೆ. ಆದರೆ ಬಳಿಕ ಪ್ರಧಾನಿ ಮೋದಿಯವರ ಗೌರವಾನ್ವಿತ ನಡೆಯನ್ನು ಗಮನಿಸಿ ತಾವೂ ಅನುಸರಿಸಿದ್ದಾರೆ. ಆದರೆ ತಮ್ಮ ದೇಶದ ಧ್ವಜವನ್ನು ಸಿಬ್ಬಂದಿಗೆ ಕೈಗೆ ನೀಡಿದ್ದಾರೆ. ಮೋದಿ ಮಾತ್ರ ನೀಡದೆ ಅದನ್ನು ತಮ್ಮ ಜೇಬಿನೊಳಗೆ ಹಾಕಿಕೊಂಡಿದ್ದಾರೆ.
ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ಗೆ ಆಗಮಿಸಿದ್ದಾರೆ.
ಜೋಹಾನ್ಸ್ಬರ್ಗ್ನಲ್ಲಿ ಮಂಗಳವಾರ ಬ್ರಿಕ್ಸ್ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ. ಶೀಘ್ರದಲ್ಲೇ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದರು.
#WATCH | Johannesburg, South Africa | PM Narendra Modi notices Indian Tricolour on the ground (to denote standing position) during the group photo at BRICS, makes sure to not step on it, picks it up and keeps it with him. South African President Cyril Ramaphosa follows suit. pic.twitter.com/vf5pAkgPQo
— ANI (@ANI) August 23, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.