ಬೆಂಗಳೂರು: ವಿಶ್ವವನ್ನೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಇಸ್ರೋದ ವಿಜ್ಞಾನಿಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದ್ದಾರೆ.
ಇಂದು ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಸ್ರೊ ಟೆಲಿಮೆಟ್ರಿ, ಪತ್ತೆಹಚ್ಚುವಿಕೆ ಮತ್ತು ಕಮಾಂಡ್ ನೆಟ್ ವರ್ಕ್ (ISTRAC) ಕೇಂದ್ರಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್ ಅವರಿಗೆ ಪೇಟ, ಶಾಲು ತೊಡಿಸಿ ಸನ್ಮಾನಿಸಿದ್ದಲ್ಲದೆ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳನ್ನು ಸನ್ಮಾನಿಸಿ ಸಿಹಿ ತಿನ್ನಿಸಿ ಸಂಭ್ರಮಿಸಿದರು.
ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು. ನಂತರ ಚಂದ್ರಯಾನ-3ರ ಕಾರ್ಯಾಚರಣೆ ಬಗ್ಗೆ ವಿಜ್ಞಾನಿಗಳಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡರು.
ಚಂದ್ರನ ದಕ್ಷಿಣ ಧ್ರುವದ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ಮೃದುವಾಗಿ ಇಳಿದ ಕ್ಷಣ ಎಲ್ಲ ಭಾರತೀಯರನ್ನು ರೋಮಾಂಚನಗೊಳಿಸಿದೆ. ಇದಕ್ಕೆ ಇಸ್ರೊ ಸಂಸ್ಥೆಯ ಇಡೀ ವಿಜ್ಞಾನಿಗಳು ಮತ್ತು ತಂತ್ರಜ್ಞರ ತಂಡ ಅಭಿನಂದನಾರ್ಹರು ಎಂದು ಸಿಎಂ ಹೇಳಿದ್ದಾರೆ. ವಿಶ್ವದ ನಾಲ್ಕೂ ಮೂಲೆಗಳಿಂದ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ.
#Chandrayaan3Success @CMofKarnataka @siddaramaiah congratulates @isro chairman S Somnath & scientists.
Visited them at ISRO Telemetry, Tracking and Command Network (ISTRAC), Peenya Industrial Area @NammaBengaluroo@AshwiniMS_TNIE @XpressBengaluru @santwana99 pic.twitter.com/5s0yIi88dU— Devaraj Hirehalli Bhyraiah (@swaraj76) August 24, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.