ನವದೆಹಲಿ: ಹಂಗೇರಿಯ ಬುಡಾಪೆಸ್ಟ್ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಜಾವೆಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಟ್ಟು ಇತಿಹಾಸ ನಿರ್ಮಿಸಿದ್ದಾರೆ. ಅವರು ಫೈನಲ್ ಪಂದ್ಯದಲ್ಲಿ 88.17 ಮೀಟರ್ ದೂರ ಜಾವಲಿನ್ ಎಸೆಯುವ ಮೂಲಕ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.
ಅವರು 2022ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಈ ಬಾರಿ ಬಂಗಾರದ ಪದಕ ಜಯಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದುಕೊಟ್ಟಿದ್ದಾರೆ.
ಆರು ಸುತ್ತಿನ ಫೈನಲ್ ಪೈಪೋಟಿಯಲ್ಲಿ ನೀರಜ್ ಛೋಪ್ರಾ ಅವರು ಕೆಚ್ಚೆದೆಯ ಪ್ರದರ್ಶನವನ್ನು ನೀಡಿದ್ದಾರೆ.
ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್ ಚೋಪ್ರಾ, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಅಗ್ರಸ್ಥಾನದೊಂದಿಗೆ ಚಿನ್ನದ ಪದಕಕ್ಕೆ ಕೊರೊಳೊಡ್ಡಿದರು.
ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.