ನವದೆಹಲಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದು ಮಹತ್ತರ ಸಾಧನೆ ಮಾಡಿರುವ ಜಾವಲಿನ್ ಥ್ರೋ ಕ್ರೀಡಾಪಟು ನೀರಜ್ ಛೋಪ್ರಾ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅಭಿನಂದಿಸಿದ್ದಾರೆ ಮತ್ತು ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ.
“ನೀರಜ್ ಛೋಪ್ರಾ ಅವರ ಬಗ್ಗೆ ಭಾರತ ಹೆಮ್ಮೆ ಪಡುತ್ತಿದೆ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸುತ್ತೇನೆ. ಅವರ ಸಾಧನೆ ಇಂತಹ ಇನ್ನಷ್ಟು ಸಾಧನೆಗಳೊಂದಿಗೆ ಬೆಳಗಲಿ: ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ರಾಷ್ಟ್ರಪತಿ ಅವರು ಬರೆದುಕೊಂಡಿದ್ದಾರೆ
ಅಲ್ಲದೇ ನೀರಜ್ ಛೋಪ್ರಾ ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಪ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಗೌರವದೊಂದಿಗೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ. ಅವರ ಅತ್ಯುತ್ತಮ ಪ್ರದರ್ಶನ ದೇಶದ ಲಕ್ಷಾಂತರ ಯುವಕರಿಗೆ ಸ್ಪೂರ್ತಿ ನೀಡುತ್ತದೆ ಎಂದಿದ್ದಾರೆ.
ಮೋದಿ ಅವರು ಕೂಡ ನೀರಜ್ ಛೋಪ್ರಾ ಸಾಧನೆಯನ್ನು ಕೊಂಡಾಡಿದ್ದು, “ಪ್ರತಿಭಾನ್ವಿತ ನೀರಜ್ ಛೋಪ್ರಾ ಅವರು ಶ್ರೇಷ್ಠತೆಗೆ ಉದಾಹರಣೆಯಾಗಿದ್ದಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಕೇವಲ ಅಥ್ಲೆಟಿಕ್ಸ್ನಲ್ಲಿ ಚಾಂಪಿಯನ್ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿದೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಗೆಲ್ಲುವ ಮೂಲಕ ಭಾರತದ ಕ್ರೀಡಾ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ ಎಂದಿದ್ದಾರೆ.
ಭಾನುವಾರ ರಾತ್ರಿ ಬುಡಾಪೆಸ್ಟ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ 88.17 ಮೀಟರ್ ದೂರ ಜಾವಲಿನ್ ಎಸೆಯುವ ಮೂಲಕ ಅವರು ಬಂಗಾರದ ಪದಕಕ್ಕೆ ಮುತ್ತಿಕ್ಕಿದರು.
India is proud of Neeraj Chopra. I convey my heartiest congratulations to him. I wish his legend grows with more such feats.
— President of India (@rashtrapatibhvn) August 28, 2023
The talented @Neeraj_chopra1 exemplifies excellence. His dedication, precision and passion make him not just a champion in athletics but a symbol of unparalleled excellence in the entire sports world. Congrats to him for winning the Gold at the World Athletics Championships. pic.twitter.com/KsOsGmScER
— Narendra Modi (@narendramodi) August 28, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.