ನವದೆಹಲಿ: ಮಾಧ್ಯಮ ಸಂಸ್ಥೆಗಳು ಪೋಸ್ಟ್ ಮಾಡಿದ ವರದಿಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿನ ‘ನಕಲಿ ಸುದ್ದಿ’ಗಳ ಮೇಲೆ ನಿಗಾ ಇಡಲು ‘ಫ್ಯಾಕ್ಟ್ ಚೆಕ್ ಯುನಿಟ್’ ಸ್ಥಾಪಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ವಿರೋಧಿಸಿದೆ.
ಭಾನುವಾರ ಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಬಾಂಬೆ ಹೈಕೋರ್ಟ್ನಲ್ಲಿ IT ನಿಯಮಗಳಿಗೆ (2023) ತಿದ್ದುಪಡಿಗಳನ್ನು ಪ್ರಶ್ನಿಸಿ ತನ್ನ ಅರ್ಜಿಯನ್ನು ಉಲ್ಲೇಖಿಸಿ ಹೇಳಿಕೆಯನ್ನು ನೀಡಿದ್ದು, “ಫ್ಯಾಕ್ಟ್ ಚೆಕ್ ಯುನಿಟ್ ವಿರುದ್ಧ ಎಚ್ಚರಿಕೆ ನೀಡಿದೆ. ಸರ್ಕಾರದ ವ್ಯಾಪ್ತಿಯಲ್ಲಿ ಇಂತಹ ಘಟಕಗಳ ಸ್ಥಾಪನೆ ಅಪಾಯಕಾರಿ, ಇವುಗಳು ಸರ್ಕಾರದ ವಿರುದ್ಧ ಧ್ವನಿಗಳನ್ನು ದಮನಿಸುವ ಅಪಾಯವಿದೆ ಎಂದಿದೆ.
“ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಸಮಸ್ಯೆ ಖಂಡಿತವಾಗಿಯೂ ಇದೆ, ವಿಶೇಷವಾಗಿ ಆನ್ಲೈನ್ ಜಾಗದಲ್ಲಿಲ್ಲೂ ಬಹಳಷ್ಟಿದೆ. ಆದರೆ ಅಂತಹ ವಿಷಯವನ್ನು ಗುರುತಿಸುವ ಮತ್ತು ತೆಗೆದುಹಾಕುವ ಪ್ರಯತ್ನಗಳನ್ನು ಸರ್ಕಾರದ ವ್ಯಾಪ್ತಿಯಲ್ಲಿಲ್ಲದ ಸ್ವತಂತ್ರ ಸಂಸ್ಥೆಗಳು ಮುನ್ನಡೆಸಬೇಕು. ಇಲ್ಲವಾದರೆ ಅದು ಭಿನ್ನಾಭಿಪ್ರಾಯದ ಧ್ವನಿಗಳನ್ನು ಹತ್ತಿಕ್ಕುವ ಸಾಧನಗಳಾಗುತ್ತವೆ” ಎಂದು ಎಡಿಟರ್ಸ್ ಗಿಲ್ಡ್ ಹೇಳಿದೆ.
“ಯಾವುದೇ ಮೇಲ್ವಿಚಾರಣಾ ಚೌಕಟ್ಟು ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳು ಸೇರಿದಂತೆ ನೈಸರ್ಗಿಕ ನ್ಯಾಯದ ತತ್ವಗಳನ್ನು ಅನುಸರಿಸಬೇಕು,ಪತ್ರಿಕಾ ಸ್ವಾತಂತ್ರ್ಯವನ್ನು ಹಾಳು ಮಾಡಬಾರದು” ಎಂದು ತಿಳಿಸಿದೆ.
“ಉದ್ದೇಶಿತ ಸತ್ಯ-ಪರಿಶೀಲನಾ ಘಟಕದ ವ್ಯಾಪ್ತಿ ಮತ್ತು ಅಧಿಕಾರಗಳು ಮತ್ತು ಅದು ಕಾರ್ಯನಿರ್ವಹಿಸುವ ಆಡಳಿತ ಕಾರ್ಯವಿಧಾನವನ್ನು ಸ್ಪಷ್ಟವಾಗಿ ನಿರ್ದಿಷ್ಟಪಡಿಸಲು ಕರ್ನಾಟಕ ಸರ್ಕಾರವನ್ನು ಒತ್ತಾಯಿಸುವುದಾಗಿ, ಈ ಚೌಕಟ್ಟನ್ನು ಅಭಿವೃದ್ಧಿಪಡಿಸಲು ಪತ್ರಿಕಾ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಲು ಕರೆ ನೀಡುವುದಾಗಿ ಗಿಲ್ಡ್ ಹೇಳಿದೆ.
EGI notes with concern, some aspects of Karnataka govt’s decision to set up a ‘fact-checking unit’ to monitor ‘fake news’. We urge all govts to ensure such units are independent of executive control and their scope and powers are specified so as to not trample upon press freedom pic.twitter.com/7G9pdOweFQ
— Editors Guild of India (@IndEditorsGuild) August 27, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.