ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಸೋಮವಾರ ವರ್ಚುವಲ್ ಮೂಲಕ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಉಭಯ ರಾಜ್ಯಗಳ ಜಲಾಶಯಗಳಲ್ಲಿನ ನೀರಿನ ಸಂಗ್ರಹ, ಮಳೆ ಪ್ರಮಾಣದ ಬಗ್ಗೆ ಚರ್ಚೆ ನಡೆದಿದೆ. ಎರಡು ರಾಜ್ಯಗಳ ವಾಸ್ತವ ಪರಿಸ್ಥಿತಿ ಲೆಕ್ಕಾಹಾಕಿ ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ.
ಕರ್ನಾಟಕ, ತಮಿಳುನಾಡು ಅಧಿಕಾರಿಗಳು ಮತ್ತು ಕೇಂದ್ರ ಜಲ ಆಯೋಗದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಮಳೆಯ ಕೊರತೆಯನ್ನು ಮಾನದಂಡವಾಗಿ ಪರಿಗಣಿಸಿ ಇನ್ನೂ 10 ದಿನಗಳ ಕಾಲ ಬಿಳಿಗೊಂಡ್ಲುವಿನಲ್ಲಿ 24,000 ಕ್ಯೂಸೆಕ್ಸ್ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಬೇಕೆಂದು ತಮಿಳುನಾಡು ಸಭೆಯಲ್ಲಿ ಒತ್ತಾಯಿಸಿದೆ. ಆದರೆ ತಮಿಳುನಾಡು ಬೇಡಿಕೆಯನ್ನು ತಿರಸ್ಕರಿಸಿದ ಸಿಡಬ್ಲ್ಯೂಆರ್ ಸಿ 7,200 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಕರ್ನಾಟಕವನ್ನು ಒತ್ತಾಯಿಸಿತು. ಆದರೆ, ಇದನ್ನು ಕರ್ನಾಟಕ ನಿರಾಕರಿಸಿತು.
ಉಭಯ ಪಕ್ಷಗಳ ಮನವಿಗಳನ್ನು ಆಲಿಸಿ ಸಮಿತಿಯು ಅಂತಿಮವಾಗಿ ಮುಂದಿನ 15 ದಿನಗಳವರೆಗೆ (29.08.20023 ರಿಂದ 12.09.2023) ಕರ್ನಾಟಕವು ಬಿಳಿಗೊಂಡ್ಲುವಿನ ನೀರು ಮಾಪಕ ಕೇಂದ್ರದಲ್ಲಿ 5,000 ಕ್ಯೂಸೆಕ್ಸ್ ನೀರಿನ ಹರಿವನ್ನು ಖಚಿತಪಡಿಸಲು ಶಿಫಾರಸು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.