ನವದೆಹಲಿ: ಪ್ರಸ್ತುತ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ಪ್ರಧಾನ ಕಛೇರಿಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಗೀತಿಕಾ ಶ್ರೀವಾಸ್ತವ ಅವರು ಪಾಕಿಸ್ಥಾನದ ಇಸ್ಲಾಮಾಬಾದ್ನಲ್ಲಿರುವ ಭಾರತದ ಹೈಕಮಿಷನ್ನಲ್ಲಿ ಭಾರತದ ಹೊಸ ಚಾರ್ಜ್ ಡಿʼಅಫೇರ್ ಆಗಿ ನೇಮಕಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುರೇಶ್ ಕುಮಾರ್ ಅವರ ಉತ್ತರಾಧಿಕಾರಿಯಾಗಿ ಗೀತಿಕ ಶರ್ಮಾ ನೇಮಕವಾಗಿದ್ದಾರೆ. ಸುರೇಶ್ ಕುಮಾರ್ ಅವರು ಕರ್ತವ್ಯ ಮುಗಿಸಿ ನವದೆಹಲಿಗೆ ಮರಳುವ ಸಾಧ್ಯತೆಯಿದೆ.
2005 ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿರುವ ಶ್ರೀವಾಸ್ತವ ಅವರು ಪ್ರಸ್ತುತ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಇಂಡೋ-ಪೆಸಿಫಿಕ್ ವಿಭಾಗದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಆಗಸ್ಟ್ 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ನಿರ್ಧಾರದ ನಂತರ ಪಾಕಿಸ್ತಾನವು ರಾಜತಾಂತ್ರಿಕ ಸಂಬಂಧಗಳನ್ನು ಡೌನ್ಗ್ರೇಡ್ ಮಾಡಿದೆ. ಇದರ ನಂತರ ಇಸ್ಲಾಮಾಬಾದ್ ಮತ್ತು ದೆಹಲಿಯಲ್ಲಿರುವ ಭಾರತ ಮತ್ತು ಪಾಕಿಸ್ತಾನಿ ಹೈಕಮಿಷನ್ಗಳು ಆಯಾ ಚಾರ್ಜ್ ಡಿʼಅಫೇರ್ಗಳ ನೇತೃತ್ವದಲ್ಲಿ ನಡೆಯುತ್ತಿವೆ.
ಶ್ರೀವಾಸ್ತವ ಅವರು ಶೀಘ್ರದಲ್ಲೇ ಇಸ್ಲಾಮಾಬಾದ್ನಲ್ಲಿ ತಮ್ಮ ನಿಯೋಜನೆಯನ್ನು ಸ್ವೀಕರಿಸುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.