ನವದೆಹಲಿ: ದೇಶದಲ್ಲಿ ಒಂದು ವರ್ಷದೊಳಗೆ 1000 ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಂಗಳವಾರ ಘೋಷಿಸಿದರು.
ರಾಷ್ಟ್ರೀಯ ಕ್ರೀಡಾ ದಿನದಂದು ನವದೆಹಲಿಯಲ್ಲಿ ಭಾರತೀಯ ಕ್ರೀಡೆಗಳ ಕುರಿತು ಪ್ರಮುಖ ಉಪಕ್ರಮಗಳಿಗೆ ಚಾಲನೆ ನೀಡಿದ ಸಚಿವರು, ಇದು ಮಾಜಿ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದಲ್ಲದೆ, ಉದಯೋನ್ಮುಖ ಕ್ರೀಡಾಪಟುಗಳಿಗೆ ಅನುಭವಿಗಳಿಂದ ಮಾರ್ಗದರ್ಶನ ಪಡೆಯುವ ಅವಕಾಶವನ್ನು ನೀಡುತ್ತದೆ ಎಂದು ಹೇಳಿದರು.
ಪ್ರತಿ ಆಟಗಾರರು ತಮ್ಮ ಕೇಂದ್ರಗಳಿಗೆ ಉಪಕರಣಗಳನ್ನು ಪಡೆಯಲು ಐದು ಲಕ್ಷ ರೂಪಾಯಿಗಳನ್ನು ಮತ್ತು ಕಾರ್ಯಾಚರಣೆಯ ವೆಚ್ಚಕ್ಕಾಗಿ ವರ್ಷಕ್ಕೆ ಇನ್ನೂ ಐದು ಲಕ್ಷ ರೂಪಾಯಿಗಳನ್ನು ಪಡೆಯುತ್ತಾರೆ ಎಂದು ಠಾಕೂರ್ ತಿಳಿಸಿದರು.
ರಾಷ್ಟ್ರೀಯ ಕ್ರೀಡಾ ದಿನದ ಸ್ಮರಣಾರ್ಥ ರಾಷ್ಟ್ರದಾದ್ಯಂತ 3500ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಚರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ದೇಶದ ಅಥ್ಲೀಟ್ ಗಳನ್ನು ಶ್ಲಾಘಿಸಿದ ಅವರು, ಅರವತ್ತು ವರ್ಷಗಳಿಗಿಂತಲೂ ಹೆಚ್ಚು ಪದಕಗಳನ್ನು ಈ ಬಾರಿ ಭಾರತ ವಿಶ್ವ ವಿಶ್ವವಿದ್ಯಾಲಯದ ಕ್ರೀಡಾಕೂಟದಲ್ಲಿ ಗೆದ್ದಿದೆ ಎಂದರು. ಇತ್ತೀಚಿನ ಚೆಸ್ ವಿಶ್ವಕಪ್ನಲ್ಲಿ 18 ವರ್ಷದ ಪ್ರಗ್ನಾನಂದ ಅವರ ಗಮನಾರ್ಹ ಪ್ರದರ್ಶನಕ್ಕಾಗಿ ಠಾಕೂರ್ ಶ್ಲಾಘಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.