ಮೈಸೂರು: ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಇಂದು ಚಾಲನೆ ನೀಡಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರು ಯೋಜನೆಗೆ ಚಾಲನೆ ನೀಡಿದರು. ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಇದೇ ವೇಳೆ ಕಾಂಗ್ರೆಸ್ನ 100 ದಿನಗಳ ಯಶಸ್ವಿ ಪುಸ್ತಕ ಬಿಡುಗಡೆ ಮಾಡಲಾಯಿತು.
ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ರಾಹುಲ್ ಗಾಂಧಿಯವರು, ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಇವತ್ತು ನಾವು ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ ಎಂದು ಹೇಳಿದರು.
#WATCH | Mysuru, Karnataka | Congress MP Rahul Gandhi transfers the amount into the bank accounts of the beneficiaries of Gruha Lakshmi Yojana, through direct benefit transfer (DBT).
The scheme was launched in the presence of Congress President Mallikarjun Kharge and him, here. pic.twitter.com/Be1XZ7Mddl
— ANI (@ANI) August 30, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.