ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯತ್ತ ಮಹತ್ವದ ಹೆಜ್ಜೆ ಇಟ್ಟಿರುವ ಕೇಂದ್ರವು, ಈ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿಯೊಂದನ್ನು ರಚಿಸಿದೆ. ಸಮಿತಿಯ ನೇತೃತ್ವವನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಹಿಸಲಿದ್ದಾರೆ.
ಸೆಪ್ಟೆಂಬರ್ 18-22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕೇಂದ್ರವು ಘೋಷಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಬಂದಿದೆ. ಅನಿರೀಕ್ಷಿತ ಅಧಿವೇಶನದ ಘೋಷಣೆಯ ನಂತರ, ಅಧಿವೇಶನದಲ್ಲಿ ‘ಒಂದು ರಾಷ್ಟ್ರ,ಒಂದು ಚುನಾವಣೆ’ಗೆ ಸಂಬಂಧಿಸಿದ ಮಸೂದೆಯನ್ನು ಮಂಡಿಸಲಾಗುವುದು ಎಂಬ ಊಹಾಪೋಹವಿದೆ. ಆದರೆ ಸರಕಾರದಿಂದ ಇದುವರೆಗೆ ಯಾವುದನ್ನೂ ಖಚಿತಪಡಿಸಿಲ್ಲ.
ಆದರೆ ವಿಶ್ವಾಸಾರ್ಹ ಮೂಲಗಳ ಪ್ರಕಾರ, ಸಂಸತ್ತಿನ ಈ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ‘ಒಂದು ರಾಷ್ಟ್ರ-ಒಂದು ಚುನಾವಣೆ’ ನಡೆಸಲು ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯ ಜೊತೆಗೆ ಲೋಕಸಭೆ ಚುನಾವಣೆಯನ್ನು ನಡೆಸುವುದು ಇದರ ಉದ್ದೇಶವಾಗಿದೆ. ಮುಂದಿನ ತಿಂಗಳ 18 ರಿಂದ 22 ರವರೆಗೆ 5 ದಿನಗಳ ಕಾಲ ವಿಶೇಷ ಸಭೆಗಳನ್ನು ನಡೆಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವರು ಪ್ರಕಟಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.