ನವದೆಹಲಿ: ರೈಲ್ವೆ ಸಚಿವಾಲಯದ 166 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರಾಗಿ ಮಹಿಳೆ ನೇಮಕಗೊಂಡಿದ್ದಾರೆ. ಕೇಂದ್ರ ಸರ್ಕಾರ ಗುರುವಾರ ಜಯಾ ವರ್ಮಾ ಸಿನ್ಹಾ ಅವರನ್ನು ನೇಮಕ ಮಾಡಿದ್ದು, ಆ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಜಯ ಸಿನ್ಹಾ ಅವರು ಸೆಪ್ಟೆಂಬರ್ 1 ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಭಾರತೀಯ ರೈಲ್ವೆ ನಿರ್ವಹಣಾ ಸೇವೆಗಳು, ಸದಸ್ಯ (ಕಾರ್ಯಾಚರಣೆ ಮತ್ತು ವ್ಯಾಪಾರ ಅಭಿವೃದ್ಧಿ), ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹುದ್ದೆಗೆ ಜಯ ವರ್ಮಾ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
ಅನಿಲ್ ಕುಮಾರ್ ಲಹೋಟಿ ಅವರ ಉತ್ತರಾಧಿಕಾರಿಯಾಗಿ ಜಯ ವರ್ಮಾ ಸಿನ್ಹಾ ಅವರು ನೇಮಕವಾಗಿದ್ದಾರೆ. ಅನಿಲ್ ಕುಮಾರ್ ಅವರ ಅಧಿಕಾರಾವಧಿಯು ಆಗಸ್ಟ್ 31, 2024 ರಂದು ಕೊನೆಗೊಳ್ಳುತ್ತದೆ. ಸಿನ್ಹಾ ಅವರು ಅಕ್ಟೋಬರ್ 1 ರಂದು ನಿವೃತ್ತರಾಗಲಿದ್ದಾರೆ.
ಜಯ ವರ್ಮಾ ಸಿನ್ಹಾ ಅವರು ಭಾರತೀಯ ರೈಲ್ವೆ ಸಂಚಾರ ಸೇವೆಯ 1986 ರ ಬ್ಯಾಚ್ ಅಧಿಕಾರಿ. ಅವರು ಪ್ರಸ್ತುತ ರೈಲ್ವೆ ಮಂಡಳಿಯಲ್ಲಿ ಸದಸ್ಯ (ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ) ಸ್ಥಾನವನ್ನು ಹೊಂದಿದ್ದಾರೆ. ಸಿನ್ಹಾ ಅವರು ರೈಲ್ವೇ ಮಂಡಳಿಯ (ಸಂಚಾರ ಸಾರಿಗೆ) ಹೆಚ್ಚುವರಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
Jaya Verma Sinha assumes charge as the Chairman and CEO of the Railway Board. She is the first woman to hold this position in the 166-year history of Indian Railways, as well as the 166-year history of the Railway Board. pic.twitter.com/w2GfHjswT2
— ANI (@ANI) September 1, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.