ಮಂಗಳೂರು : ಹನ್ನೊಂದನೆಯ ವರುಷದ ಪಿಂಗಾರ ರಾಜ್ಯೋತ್ಸವ ಪ್ರಶಸ್ತಿಗೆ ಸ್ಥಳೀಯವಾಗಿ ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ, ರಾಷ್ಟ ಮಟ್ಟದಲ್ಲಿ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಕ್ಷೇತ್ರದಲ್ಲಿ ಹೆಸರುಗಳಿಸಿದ, ಸಾಧನೆ ಮಾಡಿದವರು ತಮ್ಮ ಸಾಧನೆಯ ದಾಖಲೆಗಳೊಂದಿಗೆ ಸ್ವತ ಅಥವಾ ಇತರರ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
17 ನವೆಂಬರ್ ಡೋನ್ ಬಾಸ್ಕೋ ಹಾಲ್ನಲ್ಲಿ ಮಂಗಳೂರಿನ ಧರ್ಮಾಧ್ಯಕ್ಷರಾದ ರೈ, ರೆ| ಡಾ| ಅಲೋಶಿಯಸ್ ಪಾವ್ ಡಿ’ಸೋಜ ಅವರು ಆಕರ್ಷಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡುವರು.ಅಕ್ಟೋಬರ್10ರ ಒಳಗೆ ಅರ್ಜಿಯನ್ನೂ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಚಾಲಕರು, ಪಿಂಗಾರ ರಾಜ್ಯೋತ್ಸವ ಪ್ರಶಸ್ತಿ 2015 ಬಿಷಪ್ಸ್ ಹೌಸ್ ಚರ್ಚ್ ಬಿಲ್ಸಿಂಗ್, 2ನೇ ಮಹಡಿ, ರೂಡಿಯಾಲ್ಬೈಲ್ ಆಚೆ, ದ.ಕ., -575003 E-mail : pingaara@gmail.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.