ನವದೆಹಲಿ: ಕೋಟಕ್ ಮಹೀಂದ್ರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನಕ್ಕೆ ಉದಯ್ ಕೋಟಕ್ ಅವರು ಇಂದು ರಾಜೀನಾಮೆ ನೀಡಿದ್ದಾರೆ. ಸೆಪ್ಟೆಂಬರ್ 1ರಿಂದಲೇ ಅವರು ಈ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ಬ್ಯಾಂಕ್ ಇಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಆದರೆ ಉದಯ್ ಕೋಟಕ್ ಅವರು ಬ್ಯಾಂಕ್ನ ನಾನ್ ಎಕ್ಸಿಕ್ಯೂಟಿವ್ ನಿರ್ದೇಶಕರಾಗಿ ಮುಂದುವರಿಯುತ್ತಾರೆ ಎಂದು ತಿಳಿಸಲಾಗಿದೆ. ಬ್ಯಾಂಕ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಉದಯ್ ಕೋಟಕ್ ಅವರ ಅಧಿಕಾರಾವಧಿಯು ಡಿಸೆಂಬರ್ 31, 2023 ರಂದು ಕೊನೆಗೊಳ್ಳುತ್ತದೆ.
ಇದೀಗ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ದೀಪಕ್ ಗುಪ್ತಾ ಅವರು ಆರ್ಬಿಐ ಮತ್ತು ಬ್ಯಾಂಕ್ ಸದಸ್ಯರ ಅನುಮೋದನೆಗೆ ಒಳಪಟ್ಟು ಡಿಸೆಂಬರ್ 31 ರವರೆಗೆ ಎಂಡಿ ಮತ್ತು ಸಿಇಒ ಅವರ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ ಎಂದು ಅದು ಹೇಳಿದೆ.
ಉದಯ್ ಕೋಟಕ್ ಅವರು 1985 ರಲ್ಲಿ ಬ್ಯಾಂಕಿಂಗ್ ಅಲ್ಲದ ಹಣಕಾಸು ಸಂಸ್ಥೆಯಾಗಿ ಪ್ರಾರಂಭವಾದಾಗಿನಿಂದ ಬ್ಯಾಂಕನ್ನು ಮುನ್ನಡೆಸುತ್ತಿದ್ದರೆ. ಕೋಟಕ್ ಬ್ಯಾಂಕ್ 2003 ರಲ್ಲಿ ವಾಣಿಜ್ಯ ಸಾಲದಾತವಾಯಿತು , ಬ್ಲೂಮ್ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಕೋಟಕ್ ಅವರು ಸುಮಾರು $13.4 ಬಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.