ನವದೆಹಲಿ: ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಗ್ಲೋಬಲ್ ಫೈನಾನ್ಸ್ನ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023ರಲ್ಲಿ ಎ ಪ್ಲಸ್ ಗ್ರೇಡ್ ಗಳಿಸಿದ್ದಾರೆ. ಅಮೆರಿಕ ಮೂಲದ ಗ್ಲೋಬಲ್ ಫೈನಾನ್ಸ್ ಮ್ಯಾಗಜೀನ್ ಪ್ರಕಾರ ಮೂರು ಸೆಂಟ್ರಲ್ ಬ್ಯಾಂಕ್ ಗವರ್ನರ್ಗಳ ಪಟ್ಟಿಯಲ್ಲಿ ದಾಸ್ ಅಗ್ರಸ್ಥಾನದಲ್ಲಿದ್ದಾರೆ.
ಸ್ವಿಟ್ಜರ್ಲೆಂಡ್ನ ಥಾಮಸ್ ಜೆ ಜೋರ್ಡಾನ್ ಮತ್ತು ವಿಯೆಟ್ನಾಂನ ನ್ಗುಯೆನ್ ಥಿ ಹಾಂಗ್ ಕ್ರಮವಾಗಿ ನಂತರದ ಎರಡು ಸ್ಥಾನಗಳಲ್ಲಿದ್ದಾರೆ.
ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023 ರಲ್ಲಿ ಎ ಪ್ಲಸ್ ರೇಟಿಂಗ್ ಪಡೆದಿದ್ದಕ್ಕಾಗಿ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಆರ್ಥಿಕ ನಾಯಕತ್ವವನ್ನು ಪ್ರತಿಬಿಂಬಿಸುವ ಭಾರತಕ್ಕೆ ಇದು ಹೆಮ್ಮೆಯ ಕ್ಷಣವಾಗಿದೆ. ಆರ್ಬಿಐ ಗವರ್ನರ್ರ ಸಮರ್ಪಣೆ ಮತ್ತು ದೂರದೃಷ್ಟಿಯು ರಾಷ್ಟ್ರದ ಬೆಳವಣಿಗೆಯ ಪಥವನ್ನು ಬಲಪಡಿಸಲಿದೆ ಎಂದು ಮೋದಿ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ಅವರು ಕೂಡಾ ಆರ್ಬಿಐ ಗವರ್ನರ್ ಶಕ್ತಿಕಾಂತ ಅವರನ್ನು ಅಭಿನಂದಿಸಿದ್ದಾರೆ. ದೇಶದ ಸೆಂಟ್ರಲ್ ಬ್ಯಾಂಕ್ನ ಅವರ ನಾಯಕತ್ವವು ಇತ್ತೀಚಿನ ಪರೀಕ್ಷೆಗಳು ಮತ್ತು ಸವಾಲುಗಳನ್ನು ತಡೆದುಕೊಡಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Congratulations to RBI Governor Shri Shaktikanta Das. This is a proud moment for India, reflecting our financial leadership on the global stage. His dedication and vision continue to strengthen our nation's growth trajectory. https://t.co/MtdmI8La1T
— Narendra Modi (@narendramodi) September 1, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.