ಚೆನ್ನೈ: ರಾಕೆಟ್ ಕೌಂಟ್ಡೌನ್ ಉಡಾವಣೆಗಳ ಸಮಯದಲ್ಲಿ ಅಮೋಘವಾಗಿ ಧ್ವನಿ ನೀಡುವುದಕ್ಕೆ ಹೆಸರುವಾಸಿಯಾಗಿದ್ದ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ಎನ್ ವಲರ್ಮತಿ ಅವರು ಶನಿವಾರ ನಿಧನರಾಗಿದ್ದಾರೆ.
ಇತಿಹಾಸವನ್ನು ನಿರ್ಮಿಸಿದ ಭಾರತದ ಮಹತ್ವಾಕಾಂಕ್ಷೆಯ ಚಂದ್ರನ ಮಿಷನ್ ಚಂದ್ರಯಾನ-3 ರ ಉಡಾವಣೆಯ ಸಮಯದಲ್ಲಿ ಅವರು ವಾಯ್ಸ್ ಓವರ್ ನೀಡಿದ್ದರು. ಮಾಜಿ ಇಸ್ರೋ ನಿರ್ದೇಶಕ ಡಾ. ಪಿ ವಿ ವೆಂಕಟಕೃಷ್ಣನ್ ಅವರು ವಲರ್ಮತಿ ನಿಧನಕ್ಕೆ ಸಂತಾಪ ಸೂಚಿಸಿ ಟ್ವಿಟ್ ಮಾಡಿದ್ದಾರೆ.
”ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳ ಕೌಂಟ್ ಡೌನ್ನಲ್ಲಿ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ 3 ಕೌಂಡ್ ಡೌನ್ ಅವರ ಕೊನೆಯ ಧ್ವನಿಯಾಗಿದೆ. ಅನಿರೀಕ್ಷಿತ ನಿಧನ. ತುಂಬಾ ದುಃಖವಾಗುತ್ತಿದೆ. ಪ್ರಣಾಮಗಳು!” ಎಂದಿದ್ದಾರೆ.
The voice of Valarmathi Madam will not be there for the countdowns of future missions of ISRO from Sriharikotta. Chandrayan 3 was her final countdown announcement. An unexpected demise . Feel so sad.Pranams! pic.twitter.com/T9cMQkLU6J
— Dr. P V Venkitakrishnan (@DrPVVenkitakri1) September 3, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.