ಚೆನ್ನೈ: ಸನಾತನ ಧರ್ಮವು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕು ಎಂಬ ಡಿಎಂಕೆ ನಾಯಕ ಮತ್ತು ತಮಿಳುನಾಡು ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಭಾನುವಾರ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ತಮಿಳುನಾಡಿನ ಆಡಳಿತ ಪಕ್ಷವನ್ನು ಡಿಎಂಕೆ, INDIA ಮೈತ್ರಿಕೂಟ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಗುರಿಯಾಗಿರಿಸಿಕೊಂಡು ತೀವ್ರ ವಾಗ್ದಾಳಿಯನ್ನು ನಡೆಸಿದೆ.
ವೋಟ್ ಬ್ಯಾಂಕ್ ಮತ್ತು ತುಷ್ಟೀಕರಣ ರಾಜಕಾರಣಕ್ಕಾಗಿ INDIA ಮೈತ್ರಿಕೂಟ ಸನಾತನ ಧರ್ಮವನ್ನು ಅವಮಾನಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ದ್ವೇಷ, ವಿಷವನ್ನು ಹರಡುವ ಮತ್ತು ದೇಶದ ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡುವ ಪ್ರತಿಪಕ್ಷಗಳ ಗುಂಪನ್ನು ಜನರು ತಿರಸ್ಕರಿಸಬೇಕು ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮನವಿ ಮಾಡಿದ್ದಾರೆ.
ಹಿಂದೂ ಧರ್ಮದ “ಸಂಪೂರ್ಣ ನಿರ್ಮೂಲನೆ”ವಿರೋಧ ಪಕ್ಷದ ಮೈತ್ರಿಯ ಪ್ರಾಥಮಿಕ ಕಾರ್ಯಸೂಚಿ ಎಂಬುದು ಸ್ಪಷ್ಟವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಡಿಎಂಕೆ ನಾಯಕನ ಹೇಳಿಕೆಯನ್ನು “ದ್ವೇಷ” ಎಂದು ಬಣ್ಣಿಸಿದ ಕೇಸರಿ ಪಕ್ಷವು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ಗೆ ಒತ್ತಾಯಿಸಿದೆ.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮೂಲಕ ದೇಶದ ಶೇಕಡಾ 80 ರಷ್ಟು ಜನಸಂಖ್ಯೆಯ “ಜನಾಂಗೀಯ ಹತ್ಯೆ”ಗೆ ಡಿಎಂಕೆ ನಾಯಕ ಕರೆ ನೀಡಿದ್ದಾರೆ ಎಂದು ಬಿಜೆಪಿಯ ಐಟಿ ವಿಭಾಗದ ಉಸ್ತುವಾರಿ ಅಮಿತ್ ಮಾಳವಿಯಾ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲೂ ಉದಯನಿಧಿ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.