ನವದೆಹಲಿ: ಸಂಸ್ಕೃತಿ ಖಾತೆಯ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರು ಇಂದು ಪಾರಂಪರಿಕ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಅನುಭವವನ್ನು ಅನನ್ಯವಾಗಿಸಲು ಹೆರಿಟೇಜ್ 2.0 ಕಾರ್ಯಕ್ರಮವನ್ನು ನವದೆಹಲಿಯಲ್ಲಿ ಪ್ರಾರಂಭಿಸಿದರು.
ಖಾಸಗಿ ವಲಯದ ಕಂಪನಿಗಳು, ಟ್ರಸ್ಟ್ ಮತ್ತು ಎನ್ಜಿಒಗಳ ಸಹಯೋಗವನ್ನು ಸಾಧಿಸಲು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಈ ಕಾರ್ಯಕ್ರಮವನ್ನು ರೂಪಿಸಿದೆ. ಇದು ದೇಶದಾದ್ಯಂತ ಹರಡಿರುವ ಭಾರತದ ಶ್ರೀಮಂತ ಸಂಸ್ಕೃತಿಯ ಪರಂಪರೆಯನ್ನು ಪ್ರದರ್ಶಿಸುತ್ತಿರುವ 3,697 ಸಂರಕ್ಷಿತ ಸ್ಮಾರಕಗಳಲ್ಲಿನ ಸೌಕರ್ಯಗಳನ್ನು ಹೆಚ್ಚಿಸುವಲ್ಲಿ ಕಾರ್ಪೊರೇಟ್ ವಲಯವನ್ನು ತೊಡಗಿಸಿಕೊಳ್ಳುವ ಗುರಿಯನ್ನು ಹೊಂದಿದೆ,
ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, 2014 ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪ್ರಾಚೀನ ಪರಂಪರೆಯನ್ನು ಶ್ರೀಮಂತಗೊಳಿಸಲು ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ದೇಶದ ಅಭಿವೃದ್ಧಿಯೊಂದಿಗೆ ಪರಂಪರೆಯ ಸಂರಕ್ಷಣೆಯೂ ಅಗತ್ಯ ಎಂದರು.
ರಾಜ್ಯ ಸಂಸ್ಕೃತಿ ಸಚಿವೆ ಮೀನಾಕ್ಷಿ ಲೇಖಿ ಮಾತನಾಡಿ, ಅಡಾಪ್ಟ್ ಎ ಹೆರಿಟೇಜ್ 2.0 ಕಾರ್ಯಕ್ರಮದ ಮೂಲಕ ಭವಿಷ್ಯದ ಪೀಳಿಗೆಗೆ ಭಾರತದ ಇತಿಹಾಸದ ಪರಂಪರೆಯನ್ನು ಕಾಪಾಡಲಾಗುವುದು. ದೇಶದ ಪರಂಪರೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಅಗತ್ಯವಾಗಿದೆ. ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ನಿಧಿಗಳ ಮೂಲಕ ಪರಂಪರೆಯ ಮೇಲೆ ಇಲ್ಲಿಯವರೆಗೆ ಕೇವಲ 0.7 ಪ್ರತಿಶತದಷ್ಟು ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಲೇಖಿ ಹೇಳಿದರು.
ಭಾರತವು ಯಾವಾಗಲೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಹೆಸರುವಾಸಿಯಾಗಿದೆ. ಅದ್ಭುತವಾದ ಪುರಾತನ ಮತ್ತು ಸಾಂಸ್ಕೃತಿಕ ವೈವಿಧ್ಯತೆಯು ಭಾರತವನ್ನು ಪ್ರಪಂಚದ ಅತ್ಯಂತ ಪ್ರಮುಖ ಸ್ಥಳಗಳಲ್ಲಿ ಒಂದಾಗಿ ಮಾಡಿದೆ, ಹೀಗಾಗಿ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರನ್ನು ಭಾರತ ಆಕರ್ಷಿಸುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.