ನವದೆಹಲಿ: ಸನಾತನ ಧರ್ಮದ ಬಗ್ಗೆ ಮಾತನಾಡಿ ಓಲೈಕೆ ರಾಜಕೀಯ ಮಾಡುವುದು INDIA ಒಕ್ಕೂಟದ ಉದ್ದೇಶ ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ತಮಿಳುನಾಡು ಸಚಿವ ಉದಯ್ ಸ್ಟಾಲಿನ್ ಮತ್ತು INDIA ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
“ಉದಯ್ ಸ್ಟಾಲಿನ್ ಹೇಳಿಕೆ ನೋಡಿದ್ದೇನೆ. ಸನಾತನ ಧರ್ಮದ ಬಗ್ಗೆ ಅವರ ಹೇಳಿಕೆ ಅವರ ಮನಸ್ಥಿತಿ ತೋರಿಸುತ್ತದೆ. ಸನಾತನ ಧರ್ಮದ ಬಗ್ಗೆ ಅವರು ಹೀಗೆ ಮಾತಾಡಿದ್ದು ಸರಿಯಲ್ಲ. ಸನಾತನ ಧರ್ಮ ಸರ್ವ ಜನ ಸುಖಿನೋ ಭವಂತು ಅನ್ನೋ ಮೂಲ ತತ್ವ ಒಳಗೊಂಡಿದೆ. ಸಕಲ ಜೀವಿಗಳಿಗೆ ಒಳ್ಳೆಯದು ಆಗಲಿ ಅನ್ನೋದು ಸನಾತನ ಧರ್ಮದ ಮೂಲ. ಇದನ್ನು ಅವರು ಜಾತಿಗೆ ಹೋಲಿಸಿ, ಸನಾತನ ಧರ್ಮ ಕಿತ್ತು ಹಾಕಬೇಕು ಅಂತ ಹೇಳಿದ್ದಾರೆ. ಇದು ಹಿಟ್ಲರ್ ಮೈಂಡ್ಸೆಟ್” ಎಂದು ಕಿಡಿಕಾರಿದರು.
INDIA ಮಹಾಮೈತ್ರಿಕೂಟಕ್ಕೆ ಇಲ್ಲ. ಭಾರತ ದೇಶದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಅಕ್ಕಪಕ್ಕ ಅನೇಕ ದೇಶಗಳು ಹುಟ್ಟಿಕೊಂಡಿವೆ. ಬೇರೆ ದೇಶಗಳಲ್ಲಿ ಧರ್ಮ ಸಂಘರ್ಷ ಇದೆ. ಆದರೆ ನಮ್ಮಲ್ಲಿ ಇಲ್ಲ. ಎಲ್ಲಾ ಧರ್ಮಗಳಿಗೂ ನಮ್ಮಲ್ಲಿ ಅವಕಾಶ ಇದೆ. ಮೈತ್ರಿಕೂಟ ಅಧಿಕಾರ ಹಿಡಿಯುವ ಸಲುವಾಗಿ ದೇಶದ ಅಖಂಡತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಕಿಡಿಕಾರಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.