ಶ್ರೀನಗರ: ಜಮ್ಮು ವಿಭಾಗದ ರಿಯಾಸಿ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಸಂಹಾರ ಮಾಡಲಾಯಿತು. ಎನ್ಕೌಂಟರ್ನಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ.
ಇಬ್ಬರು ಭಯೋತ್ಪಾದಕರ ಉಪಸ್ಥಿತಿಗೆ ಸಂಬಂಧಿಸಿದಂತೆ ಪೊಲೀಸರಿಗೆ ದೊರೆತ ಮಾಹಿತಿಯನ್ನು ಆಧರಿಸಿ, ತುಲಿ ಪ್ರದೇಶದ ಗಾಲಿ ಸೊಹಾಬ್ನಲ್ಲಿ ಸೇನೆ ಮತ್ತು ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆದರೆ, ಅಡಗಿ ಕುಳಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸೈನಿಕರು ಅದಕ್ಕೆ ಪ್ರತ್ಯುತ್ತರ ನೀಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕ ಹತನಾಗಿದ್ದಾನೆ.
ಪೊಲೀಸ್ ಮೂಲಗಳಿಂದ ಬಂದ ಮಾಹಿತಿಯ ಪ್ರಕಾರ, ಸೋಮವಾರ ಇಬ್ಬರು ಭಯೋತ್ಪಾದಕರು ಪೊಲೀಸ್ ಸಿಬ್ಬಂದಿಗೆ ಸೇರಿದ ಮನೆಗೆ ಪ್ರವೇಶಿಸಿ ಆಶ್ರಯ ಮತ್ತು ಆಹಾರದ ವ್ಯವಸ್ಥೆ ಮಾಡುವಂತೆ ಕೇಳಿಕೊಂಡಿದ್ದಾರೆ, ಆದರೆ ಆ ಪೊಲೀಸ್ ಸಿಬ್ಬಂದಿ ಹೇಗೋ ಇಲಾಖೆಗೆ ಇಬ್ಬರು ಭಯೋತ್ಪಾದಕರು ಆತನ ಮನೆಯಲ್ಲಿರುವ ಮಾಹಿತಿ ನೀಡಿದ್ದಾರೆ. ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಭದ್ರತಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
#WATCH | J&K: Search operation underway in Reasi, after an encounter broke out yesterday where a terrorist was killed and a police personnel was injured. pic.twitter.com/ZQTAKMmtsC
— ANI (@ANI) September 5, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.