ಬೆಂಗಳೂರು: ಸೂರ್ಯನನ್ನು ಅಧ್ಯಯನ ಮಾಡುವ ಸಲುವಾಗಿ ಉಡಾವಣೆ ಮಾಡಿರುವ ಆದಿತ್ಯ ಎಲ್1 ಬಾಹ್ಯಾಕಾಶ ನೌಕೆ ಎರಡನೇ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ.
ಸೆ.5 ರಂದು ಮಧ್ಯರಾತ್ರಿ 2:45 ಕ್ಕೆ ಆದಿತ್ಯ ಎಲ್1 ನೌಕೆ ಎರಡನೇ ಕಕ್ಷೆಯನ್ನು ಪ್ರವೇಶಿಸಿದೆ ಎಂದು ಇಸ್ರೋ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದೆ. ಆದಿತ್ಯ ಎಲ್1 ನೌಕೆಯು ಸೆ.10 ರಂದು ರಾತ್ರಿ 2:30 ಕ್ಕೆ ಮೂರನೇ ಕಕ್ಷೆಯನ್ನು ಪ್ರವೇಶಿಸಲಿದೆ ಎಂದು ಇಸ್ರೋ ಮಾಹಿತಿ ನೀಡಿದೆ.
ಸೆ.3 ರಂದು ನೌಕೆಯು ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಬದಲಾಯಿಸಿತ್ತು. ಸೂರ್ಯನ ಅಧ್ಯಯನಕ್ಕಾಗಿ ‘ಆದಿತ್ಯ ಎಲ್1’ ಬಾಹ್ಯಾಕಾಶ ನೌಕೆಯನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಸ್ರೋ ಸೆ.2 ರಂದು ಉಡಾವಣೆ ಮಾಡಿತು. ಭಾರತದ ಮೊದಲ ಸೌರ ವೀಕ್ಷಣಾಲಯವನ್ನು ಸೂರ್ಯ ಮತ್ತು ಭೂಮಿ ನಡುವಿನ L1 ಪಾಯಿಂಟ್ನಲ್ಲಿ ಇರಿಸುವ ಮೂಲಕ ಸೂರ್ಯನ ಹೊರಗಿನ ವಾತಾವರಣ ಅಧ್ಯಯನ ಮಾಡುವ ಗುರಿಯನ್ನು ಈ ಮಿಷನ್ ಹೊಂದಿದೆ.
ಉಡಾವಣೆಯ ದಿನದಿಂದ 126 ದಿನಗಳ ಪ್ರಯಾಣದ ಬಳಿಕ ಆದಿತ್ಯ ಎಲ್1 ನೌಕೆ ತನ್ನ ನಿಗದಿತ ಗಮ್ಯಸ್ಥಾನವಾದ ಭೂಮಿ ಹಾಗೂ ಸೂರ್ಯನ ನಡುವಿನ ಎಲ್1 ಅನ್ನು ಕಕ್ಷೆ ತಲುಪಲಿದೆ. ಅದಕ್ಕೂ ಮುನ್ನ ಆದಿತ್ಯ ಎಲ್1 ಭೂಮಿಯ ಸುತ್ತ 16 ದಿನಗಳ ಕಾಲ ಸಂಚರಿಸಲಿದ್ದು, 5 ಕಕ್ಷೆ ಏರಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದೆ.
Aditya-L1 Mission:
The second Earth-bound maneuvre (EBN#2) is performed successfully from ISTRAC, Bengaluru.ISTRAC/ISRO's ground stations at Mauritius, Bengaluru and Port Blair tracked the satellite during this operation.
The new orbit attained is 282 km x 40225 km.
The next… pic.twitter.com/GFdqlbNmWg
— ISRO (@isro) September 4, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.