ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನವು ಇಂಡಿಯಾ ಹೆಸರನ್ನು ಭಾರತ ಎಂದು ಕರೆಯುವ ನಿರ್ಣಯಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಭಾರತದ ಸಂವಿಧಾನದ 1 ನೇ ವಿಧಿಯ ಹೇಳುವಂತೆ – ಇಂಡಿಯಾ, ಅಂದರೆ ಭಾರತ, ರಾಜ್ಯಗಳ ಒಕ್ಕೂಟವಾಗಿರುತ್ತದೆ. ವಿಶೇಷ ಅಧಿವೇಶನದಲ್ಲಿ ಈ ವಿಧಿಯನ್ನು ತಿದ್ದುಪಡಿ ಮಾಡುವ ಸಾಧ್ಯತೆಯಿದೆ. ಈ ಕ್ರಮದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲದಿದ್ದರೂ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ‘ರಿಪಬ್ಲಿಕ್ ಆಫ್ ಭಾರತ್’ ಎಂದು ಮಾಡಿದ ಟ್ವಿಟ್ ಊಹಾಪೋಹಗಳಿಗೆ ಉತ್ತೇಜನ ನೀಡಿದೆ.
“ರಿಪಬ್ಲಿಕ್ ಆಫ್ ಭಾರತ್ – ನಮ್ಮ ನಾಗರೀಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆಯಿದೆ” ಎಂದು ಅಸ್ಸಾಂ ಮುಖ್ಯಮಂತ್ರಿ ಟ್ವಿಟರ್ನಲ್ಲಿ ಬರೆದಿದ್ದಾರೆ. ಈ ಪೋಸ್ಟ್ ಅನ್ನು ಹಲವು ವಿರೋಧ ಪಕ್ಷದ ನಾಯಕರು ಆಡಳಿತಾರೂಢ ಬಿಜೆಪಿ ನಿರ್ಣಯವನ್ನು ತರಲಿದೆ ಎಂದು ಸೂಚಿಸುವ ವರದಿಗಳ ದೃಢೀಕರಣ ಎಂದು ವ್ಯಾಖ್ಯಾನಿಸಿದ್ದಾರೆ.
ಸೆಪ್ಟೆಂಬರ್ 18 ರಿಂದ 22 ರವರೆಗೆ ನಿಗದಿಯಾಗಿರುವ ಸಂಸತ್ತಿನ ವಿಶೇಷ ಅಧಿವೇಶನದ ಬಗ್ಗೆ ಈಗಾಗಲೇ ಹಲವು ಕುತೂಹಲಗಳು ಮೂಡಿವೆ.
REPUBLIC OF BHARAT – happy and proud that our civilisation is marching ahead boldly towards AMRIT KAAL
— Himanta Biswa Sarma (@himantabiswa) September 5, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.