ಬೆಂಗಳೂರು: ಹಿಂದೂ ಧರ್ಮ ಯಾವಾಗ ಹುಟ್ಟಿತು? ಅದನ್ನು ಯಾರು ಹುಟ್ಟಿಸಿದರು ಅನ್ನೋದು ಈಗಲೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.
ಟ್ವಿಟ್ ಮಾಡಿರುವ ಬಿಜೆಪಿ, “ಯಾರಿಗಾದರೂ ಅವರ ಮುತ್ತಾತನ, ತಾತನ ಹೆಸರು ಗೊತ್ತಿಲ್ಲವೆಂದರೆ ಅವರಿಗೆ ತಾತ-ತಂದೆಯಿಲ್ಲ ಎಂದಲ್ಲ, ಅವರಿಗೆ ಆ ಬಗ್ಗೆ ಜ್ಞಾನವಿಲ್ಲ ಎಂದಷ್ಟೇ. ಪಾಪ ಪರಮೇಶ್ವರ್ ಅವರ ಸ್ಮೃತಿ I.N.D.I ಮೈತ್ರಿಕೂಟದ ಪ್ರಭಾವದಿಂದಾಗಿ ಕೊಂಚ ಪಲ್ಲಟವಾದ ಹಾಗಿದೆ. ಹಿಂದೂ ಧರ್ಮ ಒಬ್ಬ ಪುರುಷ ಅಥವಾ ಒಂದು ಪುಸ್ತಕದಿಂದ ಹುಟ್ಟಿದ ಧರ್ಮವಲ್ಲ. ಅದಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ” ಎಂದಿದೆ.
“ಇದೊಂದು ಸಹಸ್ರಾರು ವರ್ಷಗಳಿಂದ ನಡೆದು ಬಂದ, ಬಹು ಉಪಾಸನಾ ವಿಧದ ಜೀವನ ಪದ್ಧತಿ ಎಂಬ ಕಾರಣಕ್ಕೇ ಇದು ಸನಾತನ ಧರ್ಮ ಮತ್ತು ಭಾರತ ಸನಾತನ ಭೂಮಿ. ಔರಂಗಜೇಬನಿಂದ ಹಿಡಿದು ಉದಯನಿಧಿ ಸ್ಟಾಲಿನ್ವರೆಗೆ ಅವೆಷ್ಟೋ ದಾಳಿಕೋರರನ್ನು ಈ ಮಣ್ಣು ಕಂಡ ಮೇಲೂ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಧರ್ಮ ಜಿಜ್ಞಾಸೆಗಿಂತಲೂ ಹೆಚ್ಚು ಸದ್ಯಕ್ಕೆ ನಿಮ್ಮ ಪಕ್ಷದಲ್ಲೇ ನಿಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಕಡೆಗೆ ಹೆಚ್ಚಿನ ಗಮನ ಕೊಡುವುದು ನಿಮ್ಮ ವೈಯಕ್ತಿಕ ಹಿತದ ದೃಷ್ಟಿಯಿಂದ ಒಳಿತು” ಎಂದಿದೆ.
.
ಯಾರಿಗಾದರೂ ಅವರ ಮುತ್ತಾತನ, ತಾತನ ಹೆಸರು ಗೊತ್ತಿಲ್ಲವೆಂದರೆ ಅವರಿಗೆ ತಾತ-ತಂದೆಯಿಲ್ಲ ಎಂದಲ್ಲ, ಅವರಿಗೆ ಆ ಬಗ್ಗೆ ಜ್ಞಾನವಿಲ್ಲ ಎಂದಷ್ಟೇ. ಪಾಪ @DrParameshwara ಅವರ ಸ್ಮೃತಿ I.N.D.I ಮೈತ್ರಿಕೂಟದ ಪ್ರಭಾವದಿಂದಾಗಿ ಕೊಂಚ ಪಲ್ಲಟವಾದ ಹಾಗಿದೆ.
ಹಿಂದೂ ಧರ್ಮ ಒಬ್ಬ ಪುರುಷ ಅಥವಾ ಒಂದು ಪುಸ್ತಕದಿಂದ ಹುಟ್ಟಿದ ಧರ್ಮವಲ್ಲ. ಅದಕ್ಕೆ ಆದಿಯೂ… pic.twitter.com/yCWrvb5gsP
— BJP Karnataka (@BJP4Karnataka) September 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.