ನವದೆಹಲಿ: 2024r ಜನವರಿ ವೇಳೆಗೆ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಅಶೋಕ್ ಲೇಲ್ಯಾಂಡ್ ಲಿಮಿಟೆಡ್ನ ರಜತ ಮಹೋತ್ಸವನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ನಿತಿನ್ ಗಡ್ಕರಿ ಈ ಹೇಳಿಕೆ ನೀಡಿದ್ದಾರೆ.
“ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದ್ದು, ಈ ವರ್ಷಾಂತ್ಯ ಅಥವಾ ಜನವರಿ 2024 ರ ವೇಳೆಗೆ ಕಾರ್ಯಾರಂಭವಾಗಲಿದೆ ಎಂದರು. 36 ಗ್ರೀನ್ ಎಕ್ಸ್ ಪ್ರೆಸ್ ಹೆದ್ದಾರಿ ಅಭಿವೃದ್ಧಿಪಡಿಸುತ್ತಿದ್ದು, ಚೆನ್ನೈಯಿಂದ ದೆಹಲಿಯನ್ನು ಸಂಪರ್ಕಿಸಲಾಗುತ್ತಿದೆ. ಚೆನ್ನೈನಲ್ಲಿ ಯೋಜನೆಯ ಪ್ರಗತಿ ಪರಿಶೀಲಿಸಿದ್ದು, ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ಹೈವೆಯಲ್ಲಿ ಐಷಾರಾಮಿ ಬಸ್ಗಳು ಮತ್ತು ಸ್ಲೀಪರ್ ಕೋಚ್ಗಳನ್ನು ಪ್ರಾರಂಭಿಸಬಹುದು. ಇಂಧನ ವೆಚ್ಚ ಕಡಿಮೆಯಾಗಿದ್ದು, ಟಿಕೆಟ್ ದರವನ್ನು ಶೇಕಡಾ 30 ರಷ್ಟು ಕಡಿಮೆ ಮಾಡಬಹುದು” ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಒಟ್ಟು ಉದ್ದವು ಸುಮಾರು ಶೇ. 59 ರಷ್ಟು ಹೆಚ್ಚಾಗಿದೆ ಎಂದ ಅವರು, ಭಾರತ ಈಗ ಯುಎಸ್ ನಂತರ ಎರಡನೇ ಅತಿದೊಡ್ಡ ರಸ್ತೆ ಜಾಲವನ್ನು ಹೊಂದಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.