ತಿರುಮಲ: ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯು ಕಳೆದ ಸೋಮವಾರ ತಿರುಮಲದ ಅನ್ನಮಯ್ಯ ಭವನದಲ್ಲಿ ತನ್ನ ಮೊದಲ ಸಭೆಯನ್ನು ನಡೆಸಿದ್ದು, ಸನಾತನ ಧರ್ಮವನ್ನು ಉತ್ತೇಜಿಸುವ ನಿರ್ಧಾರಗಳನ್ನು ತೆಗೆದುಕೊಂಡಿದೆ.
ರಾಮ ನಾಮದಂತೆಯೇ ಒಂದು ಕೋಟಿ ಬಾರಿ ಗೋವಿಂದಾ ನಾಮವನ್ನು ಬರೆಯುವ 25 ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಯುವಕರಿಗೆ ಅವರ ಕುಟುಂಬದೊಂದಿಗೆ ವಿಐಪಿ ದರ್ಶನವನ್ನು ಒದಗಿಸಲಾಗುವುದು ಎಂದು ಮಂಡಳಿ ಹೇಳಿದೆ.
‘ಗೋವಿಂದ ನಾಮಾವಳಿ’ ಎಂದು 10,01,116 ಬಾರಿ ಬರೆಯುವ ಯುವಕರಿಗೆ ಒಂದೇ ಬಾರಿ ದರ್ಶನ ಸೌಲಭ್ಯ ಕಲ್ಪಿಸಲು ಶ್ರೀವಾರಿ ದೇವಸ್ಥಾನ ಟ್ರಸ್ಟ್ ನಿರ್ಧರಿಸಿದೆ.
ಸಭೆಯ ನಂತರ ಟಿಟಿಡಿ ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ ಅವರು ಮಂಡಳಿಯ ನಿರ್ಧಾರಗಳನ್ನು ವಿವರಿಸಿ, “ಮಕ್ಕಳು ಮತ್ತು ಅವರ ಕುಟುಂಬಗಳಲ್ಲಿ ಭಕ್ತಿಯನ್ನು ಬೆಳೆಸಲು, ನಾವು ಗೋವಿಂದ ಕೋಟಿ ಯಜ್ಞವನ್ನು ಪ್ರಾರಂಭಿಸಿದ್ದೇವೆ” ಎಂದು ಅವರು ಹೇಳಿದರು.
ಅಲ್ಲದೇ ರಾಜ್ಯಾದ್ಯಂತ ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಗೆ ಸಾರಾಂಶವನ್ನು ಒಳಗೊಂಡಿರುವ ‘ಭಗವದ್ಗೀತೆ’ ಪುಸ್ತಕವನ್ನು ಉಡುಗೊರೆಯಾಗಿ ನೀಡಲು ಮಂಡಳಿ ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.