ನವದೆಹಲಿ: ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ಮೋದಿ ಮತ್ತು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ನಡುವೆ ಅತ್ಯಂತ ದ್ವಿಪಕ್ಷೀಯ ಮಾತುಕತೆಗಳು ನಡೆದವು.
ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಭಾರತ ಮತ್ತು ಬ್ರಿಟನ್ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಈ ಸಂವಾದದಲ್ಲಿ ನಾವು ವ್ಯಾಪಾರ ಸಂಬಂಧಗಳನ್ನು ಗಾಢವಾಗಿಸಲು ಮತ್ತು ಹೂಡಿಕೆಯನ್ನು ಉತ್ತೇಜಿಸುವ ಮಾರ್ಗಗಳನ್ನು ಚರ್ಚಿಸಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಭಾರತ ಮತ್ತು ಯುಕೆ ಸಮೃದ್ಧ ಮತ್ತು ಸುಸ್ಥಿರ ಜಗತ್ತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದಿದ್ದಾರೆ.
ಶುಕ್ರವಾರ ದೆಹಲಿಗೆ ಆಗಮಿಸಿದ ರಿಷಿ ಸುನಕ್ ಅವರು ಇಂದು ಜಿ20 ಶೃಂಗಸಭೆಯ ಮೊದಲ ಅಧಿವೇಶನದ ನಂತರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದರು.
Great to have met PM @RishiSunak on the sidelines of the G20 Summit in Delhi. We discussed ways to deepen trade linkages and boost investment. India and UK will keep working for a prosperous and sustainable planet. pic.twitter.com/7kKC17FfgN
— Narendra Modi (@narendramodi) September 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.