ನವದೆಹಲಿ: ಎರಡು ದಿನಗಳ ಜಿ20 ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಮತ್ತು ಅವರ ಉನ್ನತ ಮಟ್ಟದ ನಿಯೋಗವು ವಿಮಾನದಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಭಾನುವಾರ ರಾತ್ರಿ ದೆಹಲಿಯಲ್ಲೇ ಉಳಿದುಕೊಂಡಿದೆ.
ಜಿ20 ಶೃಂಗಸಭೆ ಮುಗಿಸಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ, ಈ ತಾಂತ್ರಿಕ ವ್ಯವಸ್ಥೆಯನ್ನು ರಾತೋರಾತ್ರಿ ಸರಿಪಡಿಸಲು ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ ಕಾರಣದಿಂದಾಗಿ ಟ್ರಡೋ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ.
ವರದಿಗಳ ಪ್ರಕಾರ ಟ್ರಡೋ ನಿನ್ನೆ ರಾತ್ರಿ 8 ಗಂಟೆಗೆ ಹೊರಡಬೇಕಾಗಿತ್ತು.
ʼವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಪ್ರಯಾಣಿಸಬೇಕಿದ್ದ CFC001 ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇದೆ ಎಂದು ಕೆನಡಾದ ಸಶಸ್ತ್ರ ಪಡೆಯಿಂದ ತಿಳಿದುಬಂದಿತು. ವಿಮಾನದಲ್ಲಿನ ದೋಷವನ್ನು ರಾತ್ರಿಯೇ ಸರಿಪಡಿಸಲಾಗುವುದಿಲ್ಲ, ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಕೆನಡಾ ನಿಯೋಗವು ಭಾರತದಲ್ಲಿಯೇ ಇರುತ್ತದೆ’ ಎಂದು ಕೆನಡಾ ಪ್ರಧಾನ ಮಂತ್ರಿ ಕಚೇರಿ ಮಾಹಿತಿ ನೀಡಿದೆ.
ಜಸ್ಟಿನ್ ಟ್ರುಡೊ, ಅವರು ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ದೆಹಲಿಗೆ ಆಗಮಿಸಿದ್ದರು. ಜಿ20 ಶೃಂಗಸಭೆ ನಡುವೆಯೇ ಟ್ರುಡೋ ಪ್ರದಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.
ಇನ್ನೊಂದೆಡೆ ಕೆನಡಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಲಿಸ್ಥಾನಿ ಅಂಶಗಳ ಬಗ್ಗೆಯೂ ಮೋದಿ ಟ್ರೋಡೋ ಅವರೊಂದಿಗೆ ವಿಷಯ ಪ್ರಸ್ತಾಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.