ಭೋಪಾಲ್: ಸನಾತನ ಧರ್ಮದ ಕುರಿತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ದೇವಸ್ಥಾನದ ಮೆಟ್ಟಿಲುಗಳು ಮತ್ತು ಮಹಡಿಗಳಲ್ಲಿ ಡಿಎಂಕೆ ನಾಯಕರ ಫೋಟೋಗಳನ್ನು ಹಾಕಲಾಗಿದೆ. ಭಕ್ತರು ಇದನ್ನು ತುಳಿದೇ ದೇಗುಲದ ಒಳಗೆ ಪ್ರವೇಶಿಸುತ್ತಿದ್ದಾರೆ.
ಜಬಲ್ಪುರದ ಗುಪ್ತೇಶ್ವರ ಮಹಾದೇವ್ ಮಂದಿರದ ವೀಡಿಯೊ ಹರಿದಾಡುತ್ತಿರುವುದು ಅಲ್ಲಿ ವ್ಯಕ್ತಿಯೊಬ್ಬ ದೇವಾಲಯದ ನೆಲದ ಮೇಲೆ ಸ್ಟಾಲಿನ್ ಮತ್ತು ಉದಯನಿಧಿಯ ಪೋಸ್ಟರ್ಗಳನ್ನು ಅಂಟಿಸುತ್ತಿರುವುದನ್ನು ಕಾಣಬಹುದು. ಆ ವ್ಯಕ್ತಿ ನಂತರ ಅಂಟಿಸಿದ ಚಿತ್ರದ ಮೇಲೆ ಹೆಜ್ಜೆ ಹಾಕುವುದನ್ನು ಕೂಡ ಕಾಣಬಹುದು.
ಸೆಪ್ಟೆಂಬರ್ 2 ರಂದು ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆ ದೇಶವ್ಯಾಪಿಯಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ.
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕೂಡ ತನ್ನ ಮಗನನ್ನು ಸಮರ್ಥಿಸಿಕೊಂಡಿದ್ದು, ಅವರು ಯಾವುದೇ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳ ಬಗ್ಗೆ ಮಾತನಾಡಿಲ್ಲ ಪರಿಶಿಷ್ಟ ಜಾತಿಗಳು, ಬುಡಕಟ್ಟುಗಳು ಮತ್ತು ಮಹಿಳೆಯರ ವಿರುದ್ಧ ತಾರತಮ್ಯ ಮಾಡುವ ಸನಾತನ ತತ್ವಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.