ಚೆನ್ನೈ: ಪ್ರತಿಪಕ್ಷಗಳ ಇಂಡಿ ಅಲಯನ್ಸ್ ಉದ್ದೇಶವೇನು ಎಂಬುದನ್ನು ತಮಿಳುನಾಡು ಸಚಿವ ಕೆ. ಪೊನ್ಮುಡಿ ಸ್ಪಷ್ಟಪಡಿಸಿದ್ದಾರೆ. ಸನಾತನ ಧರ್ಮದ ವಿರುದ್ಧ ಹೋರಾಡಲು ಇಂಡಿ ಅಲಯನ್ಸ್ ರಚಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ
“ಸನಾತನ ಧರ್ಮದ ವಿರುದ್ಧ ಹೋರಾಡಲು I.N.D.I ಒಕ್ಕೂಟ ರಚಿಸಲಾಗಿದೆ. ಇದರಲ್ಲಿನ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಸನಾತನವಿರುದ್ಧದ ಹೋರಾಟದಲ್ಲಿ ಎಲ್ಲಾ 26 ಪಕ್ಷಗಳು ಒಂದಾಗಿವೆ. ಸನಾತನ ಧರ್ಮದ ವಿರುದ್ಧ ಹೋರಾಡಲು ರಾಜಕೀಯ ಶಕ್ತಿ ಬೇಕು. ಅದಕ್ಕಾಗಿ I.N.D.I ಒಕ್ಕೂಟ ರಚಿಸಿದೆ” ಎಂದು ಡಿಎಂಕೆ ಸರ್ಕಾರದ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸನಾತನ ಧರ್ಮದ ವಿರುದ್ಧ ಡಿಎಂಕೆ ನಾಯಕರಾದ ಉದಯನಿಧಿ ಸ್ಟಾಲಿನ್, ಎ. ರಾಜಾ ನೀಡಿರುವ ಹೇಳಿಕೆಯಿಂದ I.N.D.I ಅಲಯನ್ಸ್ ನಾಯಕರು ಅಂತರ ಕಾಯ್ದುಕೊಳ್ಳುತ್ತಿರುವ ಸಂದರ್ಭದಲ್ಲೇ ಕೆ. ಪೊನ್ಮುಡಿ ಹೇಳಿಕೆ ಚರ್ಚೆ ಹುಟ್ಟು ಹಾಕಿದೆ. ಸನಾತನ ಧರ್ಮ ನಿರ್ಮೂಲನೆ ಕಾರ್ಯಕ್ರದಲ್ಲಿ ಕೆ. ಪೊನ್ಮುಡಿ ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು,ಸನಾತನ ಧರ್ಮವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಿ ಎಂದು ಕರೆದಿದ್ದಕ್ಕಾಗಿ ನಾನು ಸಂಘಟಕರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಪೊನ್ಮುಡಿ ಹೇಳಿಕೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಇಂಡಿ ಅಲಯನ್ಸ್ನ ಯಾವುದೇ ನಾಯಕರು ಬಾಯಿ ಬಿಡದೇ ಇರುವುದು ಇನ್ನಷ್ಟು ಕೆರಳಿಸಿದೆ.
ಡಿಎಂಕೆ ನಾಯಕನ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿರುಗೇಟು ನೀಡಿದ್ದಾರೆ.
I.N.D.I Alliance की मुम्बई बैठक के दो दिन बाद उदयनिधि स्टालिन का बयान आना, फिर प्रियांक खड़गे का सनातन पर आघात और आज DMK के मंत्री द्वारा ये स्वीकार करना कि I.N.D.I Alliance का गठन ही सनातन धर्म के विरोध में किया गया था, यह सोनिया गांधी, राहुल और कांग्रेस की एक सोची समझी रणनीति…
— Jagat Prakash Nadda (@JPNadda) September 12, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.