ಮಂಗಳೂರು: ಸೆ.14ರಂದು ರಾಷ್ಟ್ರೀಯ ಶಿಕ್ಷಣ ನೀತಿ-2020ರ ಕುರಿತು ಶಿಕ್ಷಣ ತಜ್ಞರ ಸಭೆ ಮಂಗಳೂರಿನ ಡೊಂಗರಕೇರಿ ಕೆನರಾ ಹೈಸ್ಕೂಲ್ ಆವರಣದಲ್ಲಿನ ಶ್ರೀ ಭುವನೇಂದ್ರ ಸಭಾಂಗಣದಲ್ಲಿ ನಡೆಯಲಿದೆ.
ಗುರುವಾರ ಸಂಜೆ 4 ಗಂಟೆಗೆ ಸಭೆ ಆರಂಭವಾಗಲಿದೆ.
ಸಭೆಯಲ್ಲಿ ಖ್ಯಾತ ಪತ್ರಕರ್ತ ರವೀಂದ್ರ ಶೆಣೈ, ಬೆಳಗಾವಿ ವಿಟಿಯು ವಿಶ್ರಾಂತ ಕುಲಪತಿ ಪ್ರೊ.ಕರಿಸಿದ್ದಪ್ಪ, ಬೆಂಗಳೂರು ಸನ್ ನಿರ್ದೇಶಕ ಗೌರೀಶ ಅವರು ವಕ್ತಾರರಾಗಿ ಭಾಗವಹಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸೇರಿದಂತೆ ಹಾಲಿ ಮತ್ತು ಮಾಜಿ ಶಾಸಕರು, ವಿಶ್ರಾಂತ ಕುಲಪತಿಗಳು, ಶಿಕ್ಷಣ ತಜ್ಞರು, ಪ್ರಾಂಶುಪಾಲರುಗಳು , ಬರಹಗಾರರು, ಅಂಕಣಕಾರರು, ಸಾಹಿತಿಗಳು, ಚಿಂತಕರು ಇದರಲ್ಲಿ ಗೌರವ ಉಪಸ್ಥಿತರಿರಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.