ಥಿಂಪು: ಭಾರತ ಮತ್ತು ಭೂತಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ತಾಂತ್ರಿಕ ಸಹಕಾರವನ್ನು ಹೆಚ್ಚಿಸುವ ಮಹತ್ವದ ಹೆಜ್ಜೆಯಲ್ಲಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಪ್ರಸ್ತುತ ಭೂತಾನ್ ಅಧಿಕಾರಿಗಳಿಗೆ ರಿಮೋಟ್ ಸೆನ್ಸಿಂಗ್ ತಂತ್ರಜ್ಞಾನದ ಕುರಿತು ಸಮಗ್ರ ತರಬೇತಿ ಕಾರ್ಯಕ್ರಮವನ್ನು ನಡೆಸುತ್ತಿದೆ.
ಸೆಪ್ಟೆಂಬರ್ 10 ರಂದು ಪ್ರಾರಂಭವಾದ ತರಬೇತಿಯನ್ನು ಭೂತಾನ್ನ ಥಿಂಪುನಲ್ಲಿ ಆಯೋಜಿಸಲಾಗಿದೆ ಮತ್ತು ಐದು ದಿನಗಳವರೆಗೆ ತರಬೇತಿ ಮುಂದುವರೆಯಲಿದೆ.
ಇಸ್ರೋ ಮತ್ತು ಭೂತಾನ್ ಸರ್ಕಾರದ ನಡುವಿನ ಈ ಸಹಯೋಗದ ಪ್ರಯತ್ನವು ಆಡಳಿತ ಮತ್ತು ಇತರ ಹಲವಾರು ಕ್ಷೇತ್ರಗಳಲ್ಲಿ ರಿಮೋಟ್ ಸೆನ್ಸಿಂಗ್ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಗೆ ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳೊಂದಿಗೆ ಭೂತಾನ್ ಅಧಿಕಾರಿಗಳಿಗೆ ತಿಳುವಳಿಕೆ ನೀಡುವ ಗುರಿಯನ್ನು ಹೊಂದಿದೆ.
ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್ನಲ್ಲಿ ಈ ಉಪಕ್ರಮವನ್ನು ಅಧಿಕೃತವಾಗಿ ಘೋಷಿಸಿದ್ದು, “ಐಐಆರ್ಎಸ್, ಎಸ್ಎಸಿ ಮತ್ತು ಎನ್ಆರ್ಎಸ್ಸಿಯ ತಜ್ಞರು ಸುಮಾರು 35 ಅಧಿಕಾರಿಗಳಿಗೆ ಥಿಂಪುನಲ್ಲಿ ತರಬೇತಿಯನ್ನು ನಡೆಸುತ್ತಿದ್ದಾರೆ” ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.