ನವದೆಹಲಿ: ಸೆಪ್ಟೆಂಬರ್ 18ರಂದು ಆರಂಭವಾಗುವ ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನಕ್ಕೂ ಮೊದಲು ಸೋಮವಾರ ಸಂಜೆ ಸರ್ಕಾರವು ಸರ್ವಪಕ್ಷ ಸಭೆಯನ್ನು ಕರೆದಿದೆ ಎಂದು ವರದಿಗಳು ತಿಳಿಸಿವೆ.
ಈ ಬಗ್ಗೆ ಟ್ವಿಟ್ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು, ” ಇದೇ ಸೆಪ್ಟೆಂಬರ್ 18 ರಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಪೂರ್ವಭಾವಿಯಾಗಿ ದಿನಾಂಕ 17 ರಂದು ಸಂಜೆ 4.30 ಕ್ಕೆ ಸರ್ವ ಪಕ್ಷಗಳ ನಾಯಕರ ಸಭೆಯನ್ನು ಕರೆಯಲಾಗಿದೆ. ಎಲ್ಲಾ ನಾಯಕರಿಗೂ ಈ ಕುರಿತು ಈ-ಮೇಲ್ ಮೂಲಕ ಮಾಹಿತಿ ನೀಡಿ, ಆಮಂತ್ರಣ ನೀಡಲಾಗಿದೆ” ಎಂದಿದ್ದಾರೆ.
ಸೋಮವಾರದ ಸರ್ವಪಕ್ಷ ಸಭೆಯು ಮುಂದಿನ ವಾರದ ಅಧಿವೇಶನದ ಅಜೆಂಡಾವನ್ನು ಚರ್ಚಿಸಬಹುದು ಎನ್ನಲಾಗಿದೆ. ಆದರೆ ವಿಶೇಷ ಅಧಿವೇಶನದ ಬಗೆಗಿನ ಸ್ಪಷ್ಟತೆಯ ಕೊರತೆಯು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ದೇಶದ ಅಧಿಕೃತ ಹೆಸರನ್ನು ಇಂಡಿಯಾದಿಂದ ಭಾರತಕ್ಕೆ ಬದಲಾಯಿಸುವ ನಿರ್ಣಯವನ್ನು ಸರ್ಕಾರವು ಮುಂದಿಡಲಿದೆ ಎಂದೂ ಹೇಳಲಾಗುತ್ತಿದೆ.
Ahead of the parliament session from the 18th of this month, an all-party floor leaders meeting has been convened on the 17th at 4.30 PM. The invitation for the same has been sent to concerned leaders through email.
Letter to followಇದೇ ಸೆಪ್ಟೆಂಬರ್ 18 ರಿಂದ ಆರಂಭವಾಗಲಿರುವ ವಿಶೇಷ…
— Pralhad Joshi (@JoshiPralhad) September 13, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.