ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಬಿನಾ ರಿಫೈನರಿಯಲ್ಲಿ ಸುಮಾರು 50 ಸಾವಿರ ಕೋಟಿ ರೂಪಾಯಿಗಳ ಎಥಿಲೀನ್ ಕ್ರ್ಯಾಕರ್ ಯೋಜನೆಗೆ ಶಂಕುಸ್ಥಾಪನೆ ಮಾಡಿದರು. ಈ ಯೋಜನೆಯ ಪ್ರಾರಂಭದೊಂದಿಗೆ, ಸುಮಾರು 2.77 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಮತ್ತು ಮಧ್ಯಪ್ರದೇಶದ ಕೈಗಾರಿಕಾ ಸನ್ನಿವೇಶದಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಲಿದೆ. ಪೆಟ್ರೋಲಿಯಂ ಕಾಂಪ್ಲೆಕ್ಸ್ ಮಾದರಿಯನ್ನೂ ಮೋದಿ ಪರಿಶೀಲಿಸಿದರು.
ಪ್ರಧಾನಮಂತ್ರಿಯವರು ಮಧ್ಯಪ್ರದೇಶದ 10 ಹೊಸ ಕೈಗಾರಿಕಾ ಯೋಜನೆಗಳಿಗೆ ವರ್ಚುವಲ್ ಆಗಿ ಅಡಿಪಾಯ ಹಾಕಿದರು. ಈ ಯೋಜನೆಗಳು 1 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಹೂಡಿಕೆಯನ್ನು ತರುತ್ತವೆ ಮತ್ತು 2.37 ಲಕ್ಷ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ.
ನರ್ಮದಾಪುರಂ ಜಿಲ್ಲೆಯಲ್ಲಿ 3,000 ಕೋಟಿ ರೂಪಾಯಿ ವೆಚ್ಚದ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಉಪಕರಣಗಳ ಉತ್ಪಾದನಾ ಕೈಗಾರಿಕಾ ಪ್ರದೇಶ, ಇಂದೋರ್ನಲ್ಲಿ ಎರಡು ಹೊಸ ಐಟಿ ಪಾರ್ಕ್ಗಳು ಮತ್ತು ದೆಹಲಿ ಮುಂಬೈ ಎಕ್ಸ್ಪ್ರೆಸ್ವೇ ಬಳಿಯ ರತ್ಲಾಮ್ನಲ್ಲಿ ಮೆಗಾ ಇಂಡಸ್ಟ್ರಿಯಲ್ ಪಾರ್ಕ್ಗೆ ಮೋದಿ ಶಂಕುಸ್ಥಾಪನೆ ಮಾಡಿದರು.
ಶಾಜಾಪುರ, ಗುನಾ, ಮೌಗಂಜ್, ಅಗರ್ ಮಾಲ್ವಾ, ನರ್ಮದಾಪುರಂ ಮತ್ತು ಮಕ್ಸಿಯಲ್ಲಿ ಆರು ಹೊಸ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಪುರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.