ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಸಮರ್ಥ ವಾದ ಮಂಡಿಸುವಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಕರ್ನಾಟಕದ ರೈತರನ್ನು ಕಡೆಗಣಿಸಿ ಅವರಿಗೆ ದ್ರೋಹ ಮಾಡುವ ಸರಕಾರ ಇಲ್ಲಿ ಆಡಳಿತ ನಡೆಸುತ್ತಿದೆ ಎಂದು ಅವರು ಆಕ್ಷೇಪಿಸಿದ್ದಾರೆ.
ರಾಜ್ಯದ ರೈತರು ಅತ್ಯಂತ ಸಂಕಷ್ಟದಲ್ಲಿದ್ದಾರೆ. ಡಿ.ಕೆ.ಶಿವಕುಮಾರ್ ಮತ್ತು ಸ್ಟಾಲಿನ್ ಅವರ ಒಳ ವ್ಯವಹಾರದ ಪರಿಣಾಮವಾಗಿ ಹಾಗೂ ಐಎನ್ಡಿಐಎ ಕೂಟಕ್ಕೆ ಪ್ರಯೋಜನ ನೀಡುವ ದೃಷ್ಟಿಯಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ಇದರಿಂದ ಬೆಂಗಳೂರಿಗೆ ಕುಡಿಯುವ ನೀರಿನ ಹಾಹಾಕಾರ ಆಗುವ ಸಾಧ್ಯತೆ ಹೆಚ್ಚಾಗಿದೆ. ಈಗಲೇ ಕೆಲವೆಡೆ ಸಮರ್ಪಕವಾಗಿ ನೀರು ಬರುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ. ಸರಕಾರ ನೀರು ಬಿಟ್ಟ ಬಳಿಕ ಕಾಟಾಚಾರಕ್ಕೆ ಸರ್ವ ಪಕ್ಷ ಸಭೆ ನಡೆಸಿದೆ. ಇನ್ನೊಂದೆಡೆ ರೈತರ ನಿರ್ಲಕ್ಷ್ಯದ ಧೋರಣೆ ಈ ಸರಕಾರದ್ದು ಎಂದು ಅವರು ಆರೋಪಿಸಿದ್ದಾರೆ.
ದಲಿತರ ಮೇಲೆ ದಬ್ಬಾಳಿಕೆ ಮಾಡುವ ಸಚಿವ ಸುಧಾಕರ್ ಅವರ ರಾಜೀನಾಮೆ ಪಡೆಯಬೇಕು. ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.