ಬೆಂಗಳೂರು: ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ ಆಧಾರಿತ ಮಿಷನ್ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆ ಇಂದು ಮುಂಜಾನೆ ನಾಲ್ಕನೇ ಕಕ್ಷೆ ಸೇರುವ ಕಾರ್ಯವನ್ನು ಯಶಸ್ವಿಯಾಗಿ ನಡೆಸಿದೆ.
ಗುರುವಾರ ಮಧ್ಯರಾತ್ರಿ 2 ಗಂಟೆಗೆ ಕಕ್ಷೆ ಬದಲಾವಣೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಆದಿತ್ಯ ನೌಕೆ ಈಗ ಭೂಮಿಯಿಂದ 256 ಕಿ.ಮೀ x 121973 ಕಿ.ಮೀ ಎತ್ತರದ ಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿದೆ ಎಂದು ಇಸ್ರೋ ಹೇಳಿದೆ.
ಈ ಕಾರ್ಯಾಚರಣೆಯ ಸಮಯದಲ್ಲಿ ಮಾರಿಷಸ್, ಬೆಂಗಳೂರು, ಎಸ್ಡಿಎಸ್ಸಿ-ಶಾರ್ ಮತ್ತು ಪೋರ್ಟ್ ಬ್ಲೇರ್ನಲ್ಲಿನ ಕೇಂದ್ರಗಳು ಉಪಗ್ರಹವನ್ನು ಟ್ರ್ಯಾಕ್ ಮಾಡಿದೆ ಎಂದು ಇಸ್ರೋ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದೆ.
ಭೂಮಿಯ ಪರಿಭ್ರಮಣೆಯಲ್ಲಿರುವ ಆದಿತ್ಯ ಎಲ್1 ನೌಕೆಯನ್ನು ಭೂಮಿಯಿಂದ ಲಗ್ರಾಂಜಿಯನ್ ಪಾಯಿಂಟ್ 1 (ಎಲ್ 1) ಬಿಂದುವಿಗೆ ರವಾನಿಸುವ ಮುಂದಿನ ಪ್ರಕ್ರಿಯೆ ಸೆ.19 ರ ಮಧ್ಯರಾತ್ರಿ 2 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.
Aditya-L1 Mission:
The fourth Earth-bound maneuvre (EBN#4) is performed successfully.ISRO's ground stations at Mauritius, Bengaluru, SDSC-SHAR and Port Blair tracked the satellite during this operation, while a transportable terminal currently stationed in the Fiji islands for… pic.twitter.com/cPfsF5GIk5
— ISRO (@isro) September 14, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.