ತಿರುವನಂತಪುರಂ: ಕೇರಳದಲ್ಲಿ ನಿಪಾ ವೈರಸ್ ಆತಂಕ ಸೃಷ್ಟಿಸಿದೆ. ಕೋಝಿಕ್ಕೋಡ್ನಲ್ಲಿ ಮತ್ತೊಬ್ಬರಿಗೆ ನಿಫಾ ನಿಪಾ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವರ ಕಚೇರಿ ದೃಢಪಡಿಸಿದೆ. ಸೋಂಕು ತಗುಲಿರುವ 39 ವರ್ಷದ ವ್ಯಕ್ತಿಯನ್ನು ಕೋಝಿಕ್ಕೋಡ್ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ ಎಂದು ಹೇಳಿದ್ದಾರೆ.
ಈ ಮೂಲಕ ಕೇರಳದಲ್ಲಿ ನಿಫಾ ವೈರಸ್ ಗೆ ತುತ್ತಾಗಿರುವವರ ಸಂಖ್ಯೆ 6ಕ್ಕೇರಿದೆ. ಮುಂಜಾಗೃತ ಕ್ರಮವಾಗಿ ಕೋಝಿಕ್ಕೋಡ್ ಶಾಲೆ-ಕಾಲೇಜುಗಳನ್ನು ಮುಚ್ಚಲಾಗಿದೆ.
ಕೋಝಿಕ್ಕೋಡ್ನಲ್ಲಿ ನಿಫಾ ಏಕಾಏಕಿ ಸಂಭವಿಸುವ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಆದರೆ ಜನರು ತಮ್ಮ ದೈನಂದಿನ ಚಟುವಟಿಕೆಗಳಿಗೆ ಹೋಗುವಾಗ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಇನ್ನೊಂದೆಡೆ ಕೇರಳದಲ್ಲಿ ನಿಪಾ ಕಾಣಿಸಿಕೊಂಡಿರುವುದು ಕರ್ನಾಟಕದಲ್ಲಿ ಆತಂಕ ಸೃಷ್ಟಿಸಿದೆ. ಪಕ್ಕದ ಕೇರಳ ರಾಜ್ಯದಲ್ಲಿ ನಿಫಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವಂತೆ ಕರ್ನಾಟಕ ಸರ್ಕಾರ ಸಾರ್ವಜನಿಕರಿಗೆ ಸಲಹೆ-ಸೂಚನೆಗಳನ್ನು ಹೊರಡಿಸಿದೆ.
“ರಾಜ್ಯದಲ್ಲಿ ಇದುವರೆಗೂ ಯಾವುದೇ ನಿಪಾ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ ಕೇರಳದ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದೇನೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಆದರೆ ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯು ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ” ಎಂದು ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ.
ರಾಜ್ಯದಲ್ಲಿ ಇದುವರೆಗೂ ಯಾವುದೇ ನಿಪಾ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ ಕೇರಳದ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದೇನೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಆದರೆ ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯು ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.
We have not identified any Nipah cases in our state… pic.twitter.com/fP7YT4tfkd
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 14, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.