ಬೀಜಿಂಗ್: ಚೀನಾದ ರಕ್ಷಣಾ ಸಚಿವ ಲಿ ಶಾಂಗ್ಫು ಅವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ಹೇಳುತ್ತಿಎ. ಶಾಂಗ್ಫು ಅವರು ಕಳೆದ 2 ವಾರಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಫೈನಾನ್ಸಿಯಲ್ ಟೈಮ್ಸ್ ವರದಿ ಹೇಳಿದೆ. ಅವರು ಎಲ್ಲಿದ್ದಾರೆ, ಹೇಗಿದ್ದಾರೆ ಎಂಬ ಬಗ್ಗೆ ಯಾವುದೇ ಸುಳಿವುಗಳೂ ಇಲ್ಲ ಎಂದು ಹೇಳಲಾಗಿದೆ.
ಜುಲೈನಲ್ಲಿ ಚೀನಾದ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ನಾಪತ್ತೆಯಾಗಿದ್ದರು. ಅವರ ಬಳಿಕ ಈಗ ಶಾಂಗ್ಫು ಕಣ್ಮರೆಯಾಗಿದ್ದಾರೆ. ಎರಡು ತಿಂಗಳ ಹಿಂದೆ ಚೀನಾದ ಅಧ್ಯಕ್ಷ ಕ್ಷಿ ಜಿನ್ಪಿಂಗ್ ಅವರು ಪೀಪಲ್ಸ್ ಲಿಬರೇಶನ್ ಆರ್ಮಿ ರಾಕೆಟ್ ಫೋರ್ಸ್ನಿಂದ ಇಬ್ಬರು ಉನ್ನತ ಜನರಲ್ ಅಧಿಕಾರಿಗಳನ್ನು ತೆಗೆದುಹಾಕಿದ್ದರು. ಒಟ್ಟಾರೆಯಾಗಿ ಹೇಳುವುದಾದರೆ ಚೀನಾ ಆಡಳಿತದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಜಗತ್ತಿಗೆ ಸ್ಪಷ್ಟವಾಗತೊಡಗಿದೆ.
ಮಾರ್ಚ್ನಲ್ಲಿ ಲಿ ಶಾಂಗ್ಫು ಚೀನಾದ ರಕ್ಷಣಾ ಸಚಿವರಾಗಿ ನೇಮಕಗೊಂಡಿದ್ದರು. ಚೀನಾದ ಐದು ರಾಜ್ಯ ಕೌನ್ಸಿಲರ್ಗಳಲ್ಲಿ ಒಬ್ಬರು. ಸಾಮಾನ್ಯ ಸಚಿವರಿಗಿಂತ ಹೆಚ್ಚಿನ ಸ್ಥಾನವನ್ನು ಹೊಂದಿರುವ ಕ್ಯಾಬಿನೆಟ್ ಸ್ಥಾನ ಇದಾಗಿದೆ.
ರಕ್ಷಣಾ ಸಚಿವರನ್ನು ಚೀನಾ ಗೃಹಬಂಧನದಲ್ಲಿ ಇಟ್ಟಿದೆ ಎಂದು ಅಮೆರಿಕಾ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.