ನವದೆಹಲಿ: ಶಾಂತಿನಿಕೇತನವನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಯುನೆಸ್ಕೋ ನಿನ್ನೆ ಟ್ವಿಟರ್ನಲ್ಲಿ ಈ ಬಗ್ಗೆ ಪ್ರಕಟಿಸಿದೆ.
ಪ್ರಸ್ತುತ ಸೌದಿ ಅರೇಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಪರಂಪರೆ ಸಮಿತಿಯ 45 ನೇ ಅಧಿವೇಶನದಲ್ಲಿ ಶಾಂತಿನಿಕೇತನವನ್ನು ಪಟ್ಟಿಗೆ ಸೇರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 1901 ರಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ತಂದೆ ಮಹರ್ಷಿ ದೇಬೇಂದ್ರನಾಥ ಟ್ಯಾಗೋರ್ ಸ್ಥಾಪಿಸಿದ ಶಾಂತಿನಿಕೇತನವು ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿದೆ.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಶುಭ ಕೋರಿದ್ದಾರೆ. ಇದು ಎಲ್ಲಾ ಭಾರತೀಯರಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಸಾಧನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿರು ಅವರು, ಶಾಂತಿನಿಕೇತನವು ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರ ದೃಷ್ಟಿಕೋನ ಮತ್ತು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಾಕಾರವಾಗಿದೆ ಎಂದು ಹೇಳಿದರು.
Delighted that Santiniketan, an embodiment of Gurudev Rabindranath Tagore's vision and India's rich cultural heritage, has been inscribed on the @UNESCO World Heritage List. This is a proud moment for all Indians. https://t.co/Um0UUACsnk
— Narendra Modi (@narendramodi) September 17, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.