ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ‘ಭಾರತ ಮಾತೆ’ ಎಂದು ಬಿಂಬಿಸುವ ಪೋಸ್ಟರ್ಗಳನ್ನು ಹಾಕಲಾಗಿದ್ದು, ಬಿಜೆಪಿ ಇದರ ವಿರುದ್ಧ ಕಿಡಿಕಾರಿದೆ.
ಸೋಮವಾರ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರನ್ನು ನಾಚಿಕೆಗೇಡು ಎಂದು ಬಣ್ಣಿಸಿ ಪಕ್ಷದ ನಾಯಕತ್ವವನ್ನು ತರಾಟೆಗೆ ತೆಗೆದುಕೊಂಡಿದೆ. ಹಳೆ ಪಕ್ಷವಾದ ಕಾಂಗ್ರೆಸ್ ನಿರಂತರವಾಗಿ ಕುಟುಂಬವಾದವನ್ನು ರಾಷ್ಟ್ರ ಮತ್ತು ಜನರ ಮೇಲೆ ಹೇರುವ ಪ್ರಯತ್ನವನ್ನು ಮಾಡುತ್ತಾ ಬಂದಿದೆ ಎಂದು ಆರೋಪಿಸಿದೆ.
ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾನುವಾರ ಹೈದರಾಬಾದ್ನಲ್ಲಿ ಪುನರ್ ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮೊದಲ ಸಭೆಯ ನಂತರ ಸೋನಿಯಾ ಗಾಂಧಿಯನ್ನು ಭಾರತ ಮಾತಾ ಎಂದು ಬಿಂಬಿಸುವ ಪೋಸ್ಟರ್ಗಳನ್ನು ಹಾಕಲಾಗಿದೆ. ಈ ಸಭೆಯಲ್ಲಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಉನ್ನತ ನಾಯಕರು ಭಾಗವಹಿಸಿದ್ದರು.
ಪೋಸ್ಟರ್ನಲ್ಲಿ ಸೋನಿಯಾ ಗಾಂಧಿ ಅವರಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೇರಿದಂತೆ ಇತರರ ಚಿತ್ರಗಳಿವೆ.
ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ಭಾರತ ಮಾತೆಯನ್ನು ಅವಮಾನಿಸುವ ಅಭ್ಯಾಸ ಕಾಂಗ್ರೆಸ್ಗೆ ಇದೆ ಎಂದು ಆರೋಪಿಸಿದರು. “ಆರಾಧನಾ ಮಿಶ್ರಾ ಅವರಂತಹ ಮೊದಲ ಕಾಂಗ್ರೆಸ್ ನಾಯಕರು ಭಾರತ್ ಮಾತಾ ಕಿ ಜೈ ಪಕ್ಷದ ಶಿಸ್ತಿಗೆ ವಿರುದ್ಧವಾಗಿದೆ ಎಂದು ಹೇಳಿದ್ದರು. ಈ ಹಿಂದೆ ಬಿ.ಡಿ ಕಲ್ಲ ಅವರು ಭಾರತ್ ಮಾತಾ ಕೀ ಜೈ ಬದಲು ಸೋನಿಯಾ ಮಾತಾ ಕೀ ಜೈ ಎಂದಿದ್ದರುʼ ಎಂದು ವಾಗ್ದಾಳಿ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.