ಲಕ್ನೋ: ಕೆಲವರು ಸಮಾಜದಲ್ಲಿ ಶಾಂತಿ ಭಗ್ನ ಮಾಡುವ ನಿಟ್ಟಿನಲ್ಲಿ ಏನಾದರೊಂದು ಕುತಂತ್ರಗಳನ್ನು ಮಾಡುತ್ತಲೇ ಇರುತ್ತಾರೆ, ಅಂತಹುದೇ ವರ್ಗಕ್ಕೆ ಸೇರಿದ ತಾಯಿ ಮತ್ತು ಮಗಳು ಉತ್ತರಪ್ರದೇಶದಲ್ಲಿ ಪೊಲೀಸರ ಅತಿಥಿಗಳಾಗಿದ್ದಾರೆ.
ಶಿವ ದೇವಸ್ಥಾನದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ ಮಗಳನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಭಾನುವಾರ ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಧರ್ಮಗುರುವನ್ನು ಕೂಡ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಈ ಇಬ್ಬರು ಉದ್ದೇಶಪೂರ್ವಕವಾಗ ದೇಗುಲದ ಆವರಣದಲ್ಲಿ ನಮಾಜ್ ಮಾಡಿದ್ದಾರೆ ಎಂಬುದು ತಿಳಿದು ಬಂದಿದೆ. ಇವರ ಕೃತ್ಯ ವಿಡಿಯೋ ರೆಕಾರ್ಡ್ ಕೂಡ ಆಗಿದೆ.
ಶುಕ್ರವಾರ ಈ ಘಟನೆ ನಡೆದಿದೆ ಎಂದು ಆರೋಪಿಸಿ ಕೇಸರಪುರ ಗ್ರಾಮದ ಮುಖ್ಯಸ್ಥ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮಗುರುಗಳ ಸಲಹೆಯ ಮೇರೆಗೆ ಮಹಿಳೆ ಮತ್ತು ಅವರ ಮಗಳು ದೇವಸ್ಥಾನದ ಆವರಣದಲ್ಲಿ ನಮಾಜ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಆ ಪ್ರದೇಶದ ಸರ್ಕಲ್ ಆಫೀಸರ್ (ಸಿಒ) ಗೌರವ್ ಸಿಂಗ್ ಮಾಹಿತಿ ನೀಡಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣದಲ್ಲಿ ನಜೀರಾ (38) ಆಕೆಯ ಮಗಳು ಸಬೀನಾ (19) ಮತ್ತು ಧರ್ಮಗುರು ಚಮನ್ ಶಾ ಮಿಯಾನ್ ಅವರನ್ನು ಬಂಧಿಸಿದ್ದೇವೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.