ನವದೆಹಲಿ: ಜೂನ್ನಲ್ಲಿ ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತ ಪಾತ್ರವಹಿಸಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಸರ್ಕಾರ ಆರೋಪಿಸಿ ಒಟ್ಟಾವದಲ್ಲಿರುವ ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿದೆ. ಇದಕ್ಕೆ ಪ್ರತಿಕಾರ ಎಂಬಂತೆ ಕೆನಡಾದ ಹಿರಿಯ ರಾಜತಾಂತ್ರಿಕರಿಗೆ ಭಾರತ ತೊರೆಯುವಂತೆ ಸೂಚನೆ ನೀಡಲಾಗಿದೆ.
ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರ ಸರ್ಕಾರವು, ಖಲಿಸ್ಥಾನಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯನ್ನು ಭಾರತ ಸರ್ಕಾರದ ಏಜೆಂಟರು ನಡೆಸಿದ್ದಾರೆ ಎಂದು ಹೇಳಲು ನಮ್ಮ ಬಳಿ ವಿಶ್ವಾಸಾರ್ಹ ಮೂಲಗಳಿವೆ ಎಂದು ಹೇಳಿದೆ. ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಕೆನಡಾದಲ್ಲಿ ಭಾರತದ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (RAW) ಮುಖ್ಯಸ್ಥರಾಗಿದ್ದ ಅಧಿಕಾರಿಯನ್ನು ಉಚ್ಛಾಟನೆ ಮಾಡಿದೆ.
ಇದಕ್ಕೆ ಪ್ರತ್ಯುತ್ತರವಾಗಿ ಭಾರತದಲ್ಲಿನ ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಲು ಸರ್ಕಾರ ನಿರ್ಧರಿಸಿದೆ. “ನಮ್ಮ ಆಂತರಿಕ ವಿಷಯಗಳಲ್ಲಿ ಕೆನಡಾದ ರಾಜತಾಂತ್ರಿಕರ ಹಸ್ತಕ್ಷೇಪ ಮತ್ತು ಭಾರತ ವಿರೋಧಿ ಚಟುವಟಿಕೆಗಳಿಂದಾಗಿ ಕ್ರಮಕೈಗೊಳ್ಳಲಾಗಿದೆ” ಎಂದು ಭಾರತ ಹೇಳಿದೆ.
ದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆನಡಾದ ಜಿ20 ಶೃಂಗಸಭೆಯಲ್ಲಿ ಪ್ರತ್ಯೇಕತಾವಾದಿ ಚಟುವಟಿಕೆಗಳು ಮತ್ತು ಕೆನಡಾದಲ್ಲಿನ ಭಾರತೀಯ ರಾಜತಾಂತ್ರಿಕ ನಿಯೋಗಗಳ ಮೇಲೆ ಖಲಿಸ್ತಾನ್ ಬೆಂಬಲಿಗರು ದಾಳಿ ಮಾಡುವ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರನ್ನು ತರಾಟೆಗೆ ತೆಗೆದುಕೊಂಡ ಬಳಿಕದ ಬೆಳವಣಿಗೆಯು ರಾಜತಾಂತ್ರಿಕ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕೆಲವು ದಿನಗಳ ನಂತರ, ಕೆನಡಾವು ಅಕ್ಟೋಬರ್ನಲ್ಲಿ ಯೋಜಿಸಲಾದ ಭಾರತದದ ಜೊತೆಗಿನ ವ್ಯಾಪಾರ ಕಾರ್ಯಾಚರಣೆಯನ್ನು ಮುಂದೂಡಿತು.
“ಕೆನಡಾದ ನೆಲದಲ್ಲಿ ಕೆನಡಾದ ಪ್ರಜೆಯ ಹತ್ಯೆಯಲ್ಲಿ ವಿದೇಶಿ ಸರ್ಕಾರದ ಯಾವುದೇ ಒಳಗೊಳ್ಳುವಿಕೆ ನಮ್ಮ ಸಾರ್ವಭೌಮತ್ವದ ಸ್ವೀಕಾರಾರ್ಹವಲ್ಲದ ಉಲ್ಲಂಘನೆಯಾಗಿದೆ. ಇದು ಮುಕ್ತ ಮತ್ತು ಪ್ರಜಾಪ್ರಭುತ್ವ ಸಮಾಜಗಳು ನಡೆಸುವ ಮೂಲಭೂತ ನಿಯಮಗಳಿಗೆ ವಿರುದ್ಧವಾಗಿದೆ” ಎಂದು ಟ್ರೂಡೊ ತುರ್ತು ಅಧಿವೇಶನದಲ್ಲಿ ಹೇಳಿತ್ತು. ಇದು ಭಾರತವನ್ನು ಕೆರಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.