ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದೊಂದಿಗೆ ಭಾರತದ ರಾಜತಾಂತ್ರಿಕ ಸಂಬಂಧ ಹಳಸಿದೆ. ಈ ಹಿನ್ನೆಲೆಯಲ್ಲಿ ಇಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಜೂನ್ನಲ್ಲಿ ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ಸರ್ಕಾರಿ ಏಜೆಂಟರಿಗೆ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೋಮವಾರ ಹೌಸ್ ಆಫ್ ಕಾಮನ್ಸ್ಗೆ ತಿಳಿಸಿದ್ದರು. ಇದಕ್ಕೆ ಭಾರತ ತೀಕ್ಷ್ಣವಾಗಿ ಉತ್ತರಿಸಿದೆ. ಇದು ಉಭಯ ದೇಶಗಳ ನಡುವಿನ ಸಂಬಂಧ ಹಳಸುವಂತೆ ಮಾಡಿದ್ದು, ಜಾಗತಿಕ ಮಟ್ಟದಲ್ಲಿ ಟ್ರುಡೋ ಹೇಳಿಕೆ ವ್ಯಾಪಕ ಸದ್ದು ಮಾಡುತ್ತಿದೆ.
ಹೀಗಿರುವಾಗಲೇ ಭಾರತ-ಕೆನಡಾ ಸಂಬಂಧಗಳ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈಶಂಕರ್ ಹೊಸ ಸಂಸತ್ ಭವನದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಟ್ರುಡೊ ಅವರ ಹೇಳಿಕೆಗಳನ್ನು ಅನುಸರಿಸಿ, ಭಾರತ ಮತ್ತು ಕೆನಡಾ ತಲಾ ಒಬ್ಬ ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿವೆ. ಕೇಂದ್ರವು ಕೆನಡಾ ಆರೋಪಗಳನ್ನು “ಅಸಂಬದ್ಧ” ಮತ್ತು “ಪ್ರೇರಿತ” ಎಂದು ತಿರಸ್ಕರಿಸಿದೆ.
ನಿಜ್ಜರ್ ಭಾರತೀಯ ಭಯೋತ್ಪಾದಕ ಮತ್ತು ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನಾಗಿದ್ದ ಮತ್ತು ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಸರ್ರೆಯ ಗುರುದ್ವಾರದ ಹೊರಗೆ ಹತ್ಯೆಗೀಡಾದ. ಅವನು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದು, ಅವನ ತಲೆ ಮೇಲೆ 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ಹೊರಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.