ನವದೆಹಲಿ: ಇಂದು ದೇಶದ ನಾರಿಶಕ್ತಿಗೆ ಅಭೂತಪೂರ್ವ ದಿನವಾಗಿದ್ದು, ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ದೊರೆಯಲಿದೆ.
454 ಸಂಸದರು ಲೋಕಸಭೆಯಲ್ಲಿ ನಾರಿ ವಂದನ್ ಶಕ್ತಿ ಮಸೂದೆ ಪರವಾಗಿ ಮತ ಚಲಾಯಿಸಿದರು. 2 ಸಂಸದರು ಮಸೂದೆಯ ವಿರುದ್ಧ ಮತ ಚಲಾಯಿಸಿದರು.
ಸುಮಾರು 8 ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ಮಸೂದೆ ಅಂಗೀಕಾರವಾಗಿದೆ.
ಸಂಸತ್ತಿನ ವಿಶೇಷ ಅಧಿವೇಶನದ 3 ನೇ ದಿನ, ಲೋಕಸಭೆಯು ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಗೆ ಸಾಕ್ಷಿಯಾಯಿತು. ಆಡಳಿತಾರೂಢ ಬಿಜೆಪಿಯಿಂದ ದಿಯಾ ಕುಮಾರಿ, ನಿರ್ಮಲಾ ಸೀತಾರಾಮನ್ ಮತ್ತು ಸ್ಮೃತಿ ಇರಾನಿ ಸೇರಿದಂತೆ ನಾಯಕರು ತಮ್ಮ ಹೇಳಿಕೆಯನ್ನು ಮಂಡಿಸಿದರು ಮತ್ತು ಸೋನಿಯಾ ಗಾಂಧಿ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡರು.
8 ಗಂಟೆಗಳ ಕಾಲ ನಡೆದ ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯಲ್ಲಿ 60 ಸಂಸತ್ ಸದಸ್ಯರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.